ಏನೇ ಆಗಲಿ ಒಳ್ಳೆಯದನ್ನೆ ಮಾಡಿ; ಮಾಡುತ್ತಲೆ ಇರಿ.


ಪ್ರಸ್ತಾಪ
ಕೇಳಿ:


ಇದೊಂದು ವಿಚಿತ್ರ ಪ್ರಪಂಚ
ಕೇಳಿ:


ಜನರು ತರ್ಕಹೀನರು, ಯುಕ್ತಾಯುಕ್ತ ಪರಿಜ್ಞಾನ ಇಲ್ಲದವರು, ಹಾಗೂ ಸ್ವಕೇಂದ್ರಿತ ಸ್ವಾರ್ಥಿಗಳು.
ಏನೇ ಇರ್ಲಿ, ಅವರನ್ನು ಪ್ರೀತಿಸಿ.
ಕೇಳಿ:


ನೀವು ಒಳ್ಳೆಯದನ್ನು ಮಾಡಿದ್ದರೆ ಜನ ನೀವು ಸ್ವಾರ್ಥದ ದುರುದ್ದೇಶಗಳನ್ನಿಟ್ಟುಕೊಂಡು ಮಾಡುತ್ತಿದ್ದೀರಿ ಎಂದು ನಿಂದಿಸುತ್ತಾರೆ.
ಯಾರು ಏನೇ ಹೇಳ್ಲಿ, ಒಳ್ಳೆಯದನ್ನು ಮಾಡಿ.
ಕೇಳಿ:


ನೀವು ಜೀವನದಲ್ಲಿ ಯಶಸ್ವಿಯಾದರೆ ನಿಮಗೆ ಖೋಟಾ ಸ್ನೇಹಿತರು, ನಿಜವಾದ ಶತ್ರುಗಳು ಸಿಗುತ್ತಾರೆ.
ಆದ್ರೂ ಯಶಸ್ವಿಯಾಗಿ.
ಕೇಳಿ:


ನೀವು ಇಂದು ಮಾಡುವ ಒಳ್ಳೆಯ ಕೆಲಸವನ್ನು ಜನ ನಾಳೆ ಮರೆತುಬಿಡುತ್ತಾರೆ.
ಆದ್ರೂ ಒಳ್ಳೆಯದನ್ನು ಮಾಡಿ.
ಕೇಳಿ:


ಪ್ರಾಮಾಣಿಕತೆ ಮತ್ತು ಮುಕ್ತ ಮನಸ್ಸು ನಿಮ್ಮನ್ನು ದುರ್ಬಲರನ್ನಾಗಿ ಮಾಡುತ್ತದೆ.
ಏನೇ ಆಗ್ಲಿ, ಪ್ರಾಮಾಣಿಕರಾಗಿ, ಮುಕ್ತಮನಸ್ಸಿನಿಂದ ಇರಿ.
ಕೇಳಿ:


ಉನ್ನತವಾದ ದೊಡ್ಡದೊಡ್ಡ ಆಲೋಚನೆಗಳ ಉನ್ನತ ಮನುಷ್ಯರನ್ನು ಕೀಳು ಆಲೋಚನೆಗಳ ಸಣ್ಣ ಜನರು ಹೊಡೆದುರುಳಿಸಬಹುದು.
ಆದ್ರೂ ದೊಡ್ಡದಾಗಿಯೇ ಆಲೋಚಿಸಿ.
ಕೇಳಿ:


ಜನ ದುರ್ಬಲರ, ದಲಿತರ ಬಗ್ಗೆ ವಿಶ್ವಾಸ ತೋರುತ್ತಾರೆ, ಆದರೆ ಸಬಲರನ್ನೆ ಹಿಂಬಾಲಿಸುತ್ತಾರೆ.
ಹಾಗಿದ್ರೂ ಕೆಲವಾದರೂ ದಲಿತ-ದುರ್ಬಲರ ಪರ ಹೋರಾಡಿ.
ಕೇಳಿ:


ನೀವು ವರ್ಷಗಳ ಕಾಲ ಕಟ್ಟಿದ್ದು ರಾತ್ರೋರಾತ್ರಿ ಹಾಳುಗೆಡವಲ್ಪಡಬಹುದು.
ಏನೇ ಆಗ್ಲಿ, ಕಟ್ಟಿಯೇ ಕಟ್ಟಿ.
ಕೇಳಿ:


ಜನರಿಗೆ ನಿಜವಾಗಲೂ ಸಹಾಯ ಬೇಕು, ಆದರೆ ನೀವು ಅವರಿಗೆ ಸಹಾಯ ಮಾಡಿದರೆ ಅವರು ನಿಮ್ಮ ಮೇಲೆಯೇ ಆಕ್ರಮಣ ಮಾಡಬಹುದು.
ಆದ್ರೂ, ಸಹಾಯ ಮಾಡಿ.
ಕೇಳಿ:


ನಿಮ್ಮ ಕೈಲಾದುದನ್ನು ನಿಮ್ಮೆಲ್ಲ ಒಳ್ಳೆಯದನ್ನು ಜಗತ್ತಿಗೆ ನೀಡಿ; ಆಗಲೂ ಜನ ನಿಮ್ಮ ಹಲ್ಲುದುರಿಸಬಹುದು.
ಆದ್ರೂ ನಿಮ್ಮೆಲ್ಲ ಒಳ್ಳೆಯದನ್ನು ಜಗತ್ತಿಗೆ ನೀಡಿ.
ಕೇಳಿ:


ಇಂತಹ ಅಸಂಗತಸತ್ಯದ ಜೀವನವನ್ನು ಜೀವಿಸುವುದು ಹೇಗೆ?
ಕೇಳಿ: