ಅದು ಹೇಗೋ ಈ ಲಿಂಕ್ ನೋಡಿದೆ. ತೆಲುಗಿನಲ್ಲಿದೆ. ಸುಮಲತರ ಟಿವಿ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳಲ್ಲಿ ಇರಬಹುದಾದ ಅತಿರಂಜನೆಯಾಗಲಿ ಅಥವ ನಾಟಕೀಯತೆಯಾಗಲಿ ಇಲ್ಲಿ , ಈ ಎಪಿಸೋಡ್ನಲ್ಲಿ, ಕಾಣಿಸಲಿಲ್ಲ. ಭಾಷೆ ಅರ್ಥವಾಗದಿದ್ದರೂ ಭಾವಾರ್ಥ ಅರ್ಥವಾಗಬಹುದು ಎಂದು ಭಾವಿಸಿ ಇಲ್ಲಿ ಕೊಡುತ್ತಿದ್ದೇನೆ.ಚಪ್ಪಲಿ ಹೊಲೆಯುವ ವೆಂಕಟೇಶ್ವರಲುರವರ ಮುಗ್ಧತೆ ಮತ್ತು ಸರಳ ಚಿಂತನೆ ನಮ್ಮ ನೆಲದ ಸಹಸ್ರಾರು ವರ್ಷಗಳ ನಾಗರಿಕತೆಯ ವಿಕಾಸದ ಮತ್ತು ಅದು ಸಾಗಿ ಬಂದ ದಾರಿಯ […]
[ಮುಗಿದಿಲ್ಲದ, ಹೆಸರಿಟ್ಟಿಲ್ಲದ, ಪರಿಷ್ಕರಣಗೊಂಡಿಲ್ಲದ ಕತೆ-ಕಾದಂಬರಿಯೊಂದರ ಅಲ್ಲಲ್ಲಿಯ ಸಾಲುಗಳು.]ತಡ ಮಾಡಿದರೆ ಅವಕಾಶ ಎಲ್ಲಿ ತಪ್ಪಿಹೋಗಿಬಿಡುತ್ತದೊ ಎಂದು ಕಿಮ್, ಕೊರಾನ್, ಮತ್ತು ಕೀಲೋ ಅಂದು ರಾತ್ರಿ ಮೂರು ಗಂಟೆಗೇ ಎದ್ದು ಒಬ್ಬೊಬ್ಬರೂ ಒಂದೊಂದು ರಿವಾಲ್ವರ್ ಅನ್ನು ಜೇಬಲ್ಲಿ ತುರಿಕಿಕೊಂಡು ಕಾರಿನಲ್ಲಿ ಓಕ್ಲ್ಯಾಂಡ್ನಿಂದ ಲಿವರ್ಮೋರ್ಗೆ ಹೊರಟರು. ಕೊರಾನ್ಗೆ ಆ ಮನೆಯ ವಿಳಾಸ ಗೊತ್ತಿತ್ತು. ಮುಂಜಾವು ನಾಲ್ಕೂವರೆಗೆಲ್ಲ ಗಾಂಜಾ ಬೆಳೆಯುತ್ […]
ನನ್ನ ಇನ್ನಿತರೆ ವ್ಯವಹಾರಗಳಲ್ಲಿ ವ್ಯಸ್ತನಾಗುವುದಕ್ಕಿಂತ ಮುಂಚೆ ಇದನ್ನು ಇಲ್ಲಿ ದಾಖಲಿಸೋಣ ಎಂದು ಬರೆಯುತ್ತಿದ್ದೇನೆ.ಕಳೆದ ವಾರ (ಜುಲೈ 3-4, 2010) ಕೆನಡಾದ ಟೊರಾಂಟೋದಲ್ಲಿ ಲಿಂಗಾಯತ (ಮತ್ತು/ಅಥವ ವೀರಶೈವ) ಸಮುದಾಯದ ಸಮಾವೇಶ ನಡೆಯಿತು. "ಉತ್ತರ ಅಮೆರಿಕದ ವೀರಶೈವ ಸಮಾಜ" ವರ್ಷಕ್ಕೊಮ್ಮೆ ನಡೆಸುವ ಸಮಾವೇಶ ಅದು. ಯಾವುದೇ ಜಾತಿಯ ಸಮಾವೇಶ ಅಥವ ಸಭೆಗಳಲ್ಲಿ ಪಾಲ್ಗೊಳ್ಳುವುದು ಜಾತ್ಯತೀತ ಮತ್ತು ಪ್ರಗತಿಪರ ನಿಲುವಿನ ಮತ್ತು ಬದ್ಧತೆಯ ಯ […]