ಅಯೋಗ್ಯರನ್ನು ಕೈಯ್ಯಾರೆ ಆರಿಸಿಕೊಂಡು ಅಭಿವೃದ್ಧಿಯಾಗಲಿಲ್ಲ ಅಂದರೆ?

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 13, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ರಾಜಧಾನಿಯ ಹೊರಗೆ ಬೆಳಗಾವಿಯಲ್ಲಿ ಮೊಟ್ಟಮೊದಲ ಬಾರಿಗೆ ನಡೆದ ವಿಶೇಷ ಅಧಿವೇಶನವನ್ನು ಗಮನಿಸುತ್ತ, ಮೂರು ವರ್ಷದ ಹಿಂದೆ ಬರೆದಿದ್ದ “ಬೆಳಗಾವಿ, ಹೊಸೂರು ಮತ್ತು ಅಯೋಗ್ಯ ಆಡಳಿತಗಾರರು” ಲೇಖನವನ್ನು ಮತ್ತೊಮ್ಮೆ ಓದುತ್ತ ಕುಳಿತಾಗ ತೀವ್ರವಾಗಿ ಅನ್ನಿಸುತ್ತಿರುವುದು ಏನೆಂದರೆ, ಇದರಲ್ಲಿ ಜನರ ಪಾಲು ಏನೂ ಇಲ್ಲವೆ ಎನ್ನುವುದು. ಅಯೋಗ್ಯ ಆಡಳಿತಗಾರರು ಎಂದರೆ ಯಾರು? ಪ್ರಜಾಪ್ರಭುತ್ವದಲ್ಲಿ ಅಯೋಗ್ಯರು ಅದು ಹೇಗೆ ಆಡಳಿತಗಾರರಾದರು? ಅವರನ್ನು ಚುನಾಯಿಸಿದವರು ಯಾರು? ಯಾಕಾಗಿ ಅಂತಹವರನ್ನು ಚುನಾಯಿಸಿದರು? [...]

ಮುಖ್ಯಮಂತ್ರಿ ಹೆಸರಿನ ಉಪ ಮುಖ್ಯಮಂತ್ರಿಗಳು-ಧರಂ, ಕುಮಾರ್

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 06, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಶಿಕ್ಷಣ ಬಚಾವೊ ಆಂದೋಲನವಂತೆ, ಅದು ವಾರದ ಹಿಂದೆ ಬೆಂಗಳೂರಿನಲ್ಲಿ ಶಿಕ್ಷಣ ಸಂಬಂಧಿ ವಿಚಾರ ಸಂಕಿರಣ ಏರ್ಪಡಿಸಿತ್ತಂತೆ. ಅಲ್ಲಿ ಪ್ರಾಸಂಗಿಕವಾಗಿ ಕರ್ನಾಟಕದ ಉನ್ನತ ಶಿಕ್ಷಣ (?) ಸಚಿವ ಡಿ.ಎಚ್. ಶಂಕರಮೂರ್ತಿ ಟಿಪ್ಪು ಸುಲ್ತಾನನ ಬಗ್ಗೆ ಮಾತನಾಡಿದರಂತೆ. ಅವರ ಪ್ರಕಾರ ಪರ್ಷಿಯನ್ ಅನ್ನು ರಾಜ್ಯ ಭಾಷೆ ಮಾಡಿದ ಟಿಪ್ಪು ಸುಲ್ತಾನನಿಗೆ ರಾಜ್ಯದ ಇತಿಹಾಸದಲ್ಲಿ ಸ್ಥಾನ ಕೊಡಬಾರದಂತೆ! ಆತ ಕನ್ನಡ ವಿರೋಧಿಯಂತೆ. ಬಲವಂತವಾಗಿ ಮತಾಂತರ ಮಾಡಿದನಂತೆ. ಶಂಕರಮೂರ್ತಿ ಇದೆಲ್ಲವನ್ನು [...]

ಗೃಹ ಖಾತೆಯೆನ್ನುವುದು ಒಂದಿದೆಯೆ?

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 29, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಕರ್ನಾಟಕ ರಾಜ್ಯದ ಗೃಹ ಸಚಿವರಾದ ಎಂ.ಪಿ. ಪ್ರಕಾಶ್ ‘ಈ ವರ್ಷವೂ ಯಾವುದೇ ಕಾರಣಕ್ಕೂ ಬಾಬಾಬುಡನ್‌ಗಿರಿಯ ಶೋಭಾಯಾತ್ರೆಗೆ ಅವಕಾಶ ಕೊಡುವುದಿಲ್ಲ. ಅದನ್ನು ನಿಷೇಧಿಸುತ್ತೇವೆ’ ಎಂದು ಪತ್ರಕರ್ತರಿಗೆ ಹೇಳಿಕೆ ಕೊಡುತ್ತಾರೆ. ಅದಾದ ಒಂದೆರಡು ದಿನಗಳಲ್ಲಿಯೆ ಆ ಖಾತೆಗೆ ಎಳ್ಳಷ್ಟೂ ಸಂಬಂಧವಿಲ್ಲದ, ಆದರೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಉನ್ನತ ಶಿಕ್ಷಣ ಸಚಿವ ಡಿ.ಎಚ್. ಶಂಕರಮೂರ್ತಿ, ‘ಅದು ಪ್ರಕಾಶರ ಸ್ವಂತ ಅಭಿಪ್ರಾಯವೇ ಹೊರತು ಸರ್ಕಾರದ ತೀರ್ಮಾನವಲ್ಲ’ ಎಂದು ಸ್ಪಷ್ಟಪಡಿಸುತ್ತಾರೆ! [...]

ಭೈರಪ್ಪನವರ ಬೈರಿಗೆ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 22, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಸಮ್ಮೇಳನದಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಇದ್ದಿದ್ದರಲ್ಲಿ ಪರವಾಗಿಲ್ಲ ಎಂಬಷ್ಟು ಜನ ಇದ್ದದ್ದು ಭೈರಪ್ಪನವರೊಂದಿಗೆ ಇದ್ದ ಸಂವಾದದ ಕಾರ್ಯಕ್ರಮದಲ್ಲಿ. ಅಮೇರಿಕಾದಲ್ಲಿನ ಕನ್ನಡ ಓದುಗರಲಿಯೂ ಭೈರಪ್ಪ ಜನಪ್ರಿಯ ಸಾಹಿತಿ. ಇದಕ್ಕೆ ಮುಖ್ಯ ಕಾರಣ, ತಮ್ಮ 20-30 ರ ವಯಸ್ಸಿನ ಆಸುಪಾಸಿನಲ್ಲಿ ಈ ದೇಶಕ್ಕೆ ಬಂದಿರುವ ಬಹುಪಾಲು ಕನ್ನಡಿಗರ ಕನ್ನಡ ಓದು ನಿಂತಿರುವುದು ಭೈರಪ್ಪನವರ ಕಾದಂಬರಿಗಳೊಂದಿಗೆ. ಅಲ್ಲಿಂದೀಚೆ ಬಂದ ಇತರ ಮಹತ್ವದ ಲೇಖಕರನ್ನಾಗಲಿ ಅಥವ ಕುವೆಂಪು, ಕಾರಂತ, ಅನಂತಮೂರ್ತಿ, [...]

‘ಅಕ್ಕ’ ಸಂಭ್ರಮದಲ್ಲಿ…

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 15, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) “ಎಲ್ಲಾ ಅಡೆತಡೆಗಳನ್ನು ದಾಟಿ ವಿಮಾನ ಕ್ಷೇಮವಾಗಿ ನೆಲಕ್ಕಿಳಿಯಿತು.” “ವಿಮಾನದಲ್ಲಿದ್ದವರೆಲ್ಲ ಸಂತೋಷವಾಗಿ ಚಪ್ಪಾಳೆ ತಟ್ಟಿ ವಿಮಾನ ಚಾಲಕರ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದರು.” ಹೀಗೆ ಅನೇಕ ಕಡೆ ಓದಿದ್ದೆ. ನನ್ನ ಹಲವಾರು ವಿಮಾನ ಪ್ರಯಾಣಗಳಲ್ಲಿ ಇಂತಹುದು ಎಂದೂ ಆಗಿರಲಿಲ್ಲ. ಆಗಬೇಕು ಎಂಬ ಆಸೆಯೂ ನನಗಿರಲಿಲ್ಲ. ಅಕ್ಕ ಸಮ್ಮೇಳನಕ್ಕೆ ಮೂರು ದಿನದ ಹಿಂದೆ ಅಮೇರಿಕದ ನೆಲ ಮುಟ್ಟಿದ ಅರ್ನೆಸ್ಟೊ ಚಂಡಮಾರುತ, ಕ್ರಮೇಣ ಬಲವೃದ್ಧಿಸಿಕೊಂಡು ಸಮ್ಮೇಳನ ನಡೆಯುತ್ತಿದ್ದ ಕಡೆಗೆ ತನ್ನ ಪಥ [...]