(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ನವೆಂಬರ್ 10, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ನನ್ನ ಪ್ರಕಾರ ಲಂಚದಲ್ಲಿ ಎರಡು ವಿಧ. ಒಂದು, ಕಾನೂನುಬದ್ಧವಾಗಿ ಯಾವುದೇ ತಕರಾರಿಲ್ಲದೆ ಆಗಬೇಕಾದ ಕೆಲಸಕ್ಕೆ ಕೊಡುವ ಲಂಚ; ಉದಾಹರಣೆಗೆ, ಜನನಮರಣ ಪತ್ರಕ್ಕೆ, ಚಾಲಕ ಪರವಾನಿಗೆ ಪಡೆಯಲು, ರೇಷನ್ ಕಾರ್ಡ್ ಪಡೆಯಲು, ವಿದ್ಯುತ್ ಸಂಪರ್ಕ ಪಡೆಯಲು, ಜಾತಿ ಪ್ರಮಾಣ ಪತ್ರ, ಇತರೆ. ಇನ್ನೊಂದು, ಕಾನೂನು ವಿರೋಧಿ ಕೆಲಸಗಳಿಗೆ ಕೊಡುವ ಲಂಚ: ಉದಾಹರಣೆಗೆ, ಇನ್ನೂ ಆಗದಿರುವ ಕಾಮಗಾರಿಗಳಿಗೆ ಕಳ್ಳತನದಲ್ಲಿ ಬಿಲ್ ಮಾಡಿಸಿಕೊಳ್ಳಲು ಕೊಡುವ ಹಣ, ಸುಳ್ಳು ದಾಖಲೆಗಳನ್ನು [...]
(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ನವೆಂಬರ್ 3, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಹೀಗೊಂದು ಸಭೆ:ಅಕ್ಕ ಸಮ್ಮೇಳನಕ್ಕೆ ಬಂದಿದ್ದ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಸ್ಯಾನ್ ಫ್ರಾನ್ಸಿಸ್ಕೋದ ಸಿಲಿಕಾನ್ ಕಣಿವೆಗೂ ಬಂದಿದ್ದರು. ಆ ಪ್ರಯುಕ್ತ ಸ್ಥಳೀಯ ಕನ್ನಡ ಕೂಟ ಅವರೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಿತ್ತು. ಹಿಂದುಗಳು ಪೂಜಿಸುವ ಧರ್ಮಸ್ಥಳದ ಮಂಜುನಾಥ ದೇವಸ್ಥಾನದ ಉಸ್ತುವಾರಿ ಜೈನ ಮತದ ಹೆಗ್ಗಡೆ ಮನೆಯವರದು. ಆದಾಯ ಮತ್ತು ತೀರ್ಥಯಾತ್ರೆಯ ವಿಚಾರದಲ್ಲಿ ಕರ್ನಾಟಕದ ತಿರುಪತಿ ಧರ್ಮಸ್ಥಳ. ಹಾಗಾಗಿ ದೇವಾಲಯದ ಖರ್ಚಿಗಿಂತ ಅನೇಕ ಪಟ್ಟು ಹೆಚ್ಚಿನ ಆದಾಯ ಈ [...]
(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 27, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಆಮಿಷ್ ಜನರ ಹಿನ್ನೆಲೆ: 17 ನೆ ಶತಮಾನದಲ್ಲಿ ಜೇಕಬ್ ಅಮ್ಮನ್‌ನಿಂದ ಯೋರೋಪ್‌ನಲ್ಲಿ ಆರಂಭವಾದದ್ದು ಅಮಿಷ್ ಚಳವಳಿ. ಇದಕ್ಕೆ ಮೂಲ ಮೆನ್ನೊನೈಟ್ಸ್ ಎಂಬ ಮತ್ತೊಂದು ಕ್ರಿಶ್ಚಿಯನ್ ಚಳವಳಿ. ಮೆನ್ನೊನೈಟ್ಸ್ ಆಧುನಿಕರಣಗೊಳ್ಳುತ್ತಿದೆ ಎನ್ನಿಸಿದಾಗ ಮತ್ತೆ ಅದರ ಮೂಲ ಕಟ್ಟುಪಾಡುಗಳನ್ನು ಯಾವುದೇ ರಾಜಿಯಿಲ್ಲದೆ ಉಳಿಸಿಕೊಳ್ಳಬೇಕು ಎಂದು ಹುಟ್ಟಿದ್ದು ಆಮಿಷ್ ಗುಂಪು. 18 ನೆ ಶತಮಾನದ ಆರಂಭದಲ್ಲಿ ಕೆಲವು ಆಮಿಷ್ ಜನ ಅಮೇರಿಕಕ್ಕೆ ವಲಸೆ ಬಂದರು. ಹೀಗೆ ಬಂದವರು ಈಗ [...]
(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 20, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಅಂದು ಗಾಂಧಿ ಜಯಂತಿ. ಬೆಳಗಿನಿಂದ ಅಲ್ಲಲ್ಲಿ ಕೇಳಿಬಂದ ಗಾಂಧಿಯನ್ನು ನೆನಪಿಸಿಕೊಳ್ಳುತ್ತ ಭಾರತದಲ್ಲಿನ ಮಕ್ಕಳು ಇನ್ನೇನು ನಿದ್ದೆಯ ಸೆರಗಿಗೆ ಜಾರಿಕೊಳ್ಳಬೇಕು ಎನ್ನುವ ಸಮಯದಲ್ಲಿ ಅಮೇರಿಕದ ಪೆನ್‌ಸಿಲ್ವೇನಿಯ ರಾಜ್ಯದಲ್ಲಿ ಬೆಳ್ಳನೆ ಬೆಳಗು. ಅಲ್ಲಿಯ ಏಕೋಪಾಧ್ಯಾಯ ಶಾಲೆಯೊಂದರಲ್ಲಿ ಹಿರಿಕಿರಿಯ ಮಕ್ಕಳು ಒಂದೇ ಕೋಣೆಯಲ್ಲಿ ಪಾಠಕ್ಕೆ ಸೇರಿದ್ದರು! ಹೌದು, ಎಲ್ಲಾ ವಯಸ್ಸಿನ ಎಲ್ಲಾ ತರಗತಿಯ ಮಕ್ಕಳಿಗೂ ಒಂದೇ ಕೋಣೆಯಲ್ಲಿ ಒಬ್ಬರೆ ಅಧ್ಯಾಪಕರು ಪಾಠ ಮಾಡುವ ಇಂತಹ ಅನೇಕ ಏಕೋಪಾಧ್ಯಾಯ ಶಾಲೆಗಳು [...]