ಇಬ್ಬರು ರಾಷ್ಟ್ರಾಧ್ಯಕ್ಷರ ಮರಣ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಜನವರಿ 12, 2007 ರ ಸಂಚಿಕೆಯಲ್ಲಿನ ಅಂಕಣ ಲೇಖನ) 93 ವರ್ಷದ ತುಂಬು ಜೀವನ ನಡೆಸಿದ ಮುದುಕನೊಬ್ಬ ಕಳೆದ ವಾರ ಅಮೇರಿಕದಲ್ಲಿ ತೀರಿಕೊಂಡ. 93 ವರ್ಷದ ಹಿಂದೆ, ಆ ಮನುಷ್ಯ ಹುಟ್ಟಿದ 16 ದಿನಕ್ಕೆಲ್ಲ ಆ ಮಗುವಿನ ಅಮ್ಮ ತನ್ನ ಗಂಡನನ್ನು ಬಿಟ್ಟು ತನ್ನ ತಂದೆಯ ಮನೆ ಸೇರಿಕೊಂಡಳು. ಕಾರಣ? ಆ ಮಗುವಿನ ಅಪ್ಪ ಮಹಾ ಕುಡುಕನಾಗಿದ್ದ. ಹೆಂಡತಿಯನ್ನು ಗರ್ಭಿಣಿ, ಬಾಣಂತಿ ಎನ್ನದೆ ಹೊಡೆಯುತ್ತಿದ್ದ. “ಮಗುವನ್ನು, ನಿನ್ನನ್ನು ಸಾಸಿಬಿಡುತ್ತೇನೆ” ಎಂದು ಮಾಂಸ ಕಡಿಯುವ [...]

ಅಣ್ವಸ್ತ್ರ ಒಪ್ಪಂದಕ್ಕೆ ವಿರೋಧವೇಕೆ?

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಜನವರಿ 5, 2007 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಇಬ್ಬರು ಬದ್ಧ ವಿರೋಧಿಗಳು ಒಂದು ವಿಷಯದ ಮೇಲೆ ಸಹಮತ ವ್ಯಕ್ತಪಡಿಸುವುದು ಬಹಳ ಅಪರೂಪ. ಅಮೇರಿಕದ ಸೆನೆಟ್ ಭಾರತದೊಂದಿಗಿನ ಹೊಸ ಅಣ್ವಸ್ತ್ರ ಒಪ್ಪಂದಕ್ಕೆ ಅನುಮೋದನೆ ನೀಡಿ, ಜಾರ್ಜ್ ಬುಷ್ ಅದಕ್ಕೆ ಸಹಿ ಹಾಕಿದ ನಂತರ ಭಾರತದಲ್ಲಿ ಎಡಪಂಥೀಯ ಕಮ್ಯುನಿಸ್ಟ್ ಪಕ್ಷಗಳು ಹಾಗು ಬಲಪಂಥೀಯ ಬಿಜೆಪಿ ಆ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿದವು. ಇಂತಹುದು ಅಪರೂಪವಾದರೂ ಇದರಲ್ಲಿ ಆಶ್ಚರ್ಯ ಪಡುವಂತಹುದು ಏನೂ ಇಲ್ಲ. ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ಕೊಟ್ಟಿರುವ [...]

ಸಾಹಿತ್ಯ ಗೋಷ್ಠಿ ಮತ್ತು ಮರ್ಕ್ಯುರಿ ನ್ಯೂಸ್

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಡಿಸೆಂಬರ್ 29, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ವಿಶ್ವನಾಥ್ ಹುಲಿಕಲ್‌ನವರು ನಮ್ಮ ಸಾಲುಮರದ ತಿಮ್ಮಕ್ಕನವರ ಊರಾದ ಹುಲಿಕಲ್‌ನವರು. ಅಮೇರಿಕದ ಸಿಲಿಕಾನ್ ಕಣಿವೆಯಲ್ಲಿ ಕನ್ನಡದ ಸಾಹಿತ್ಯ ಪರಿಚಾರಕರಲ್ಲಿ ಪ್ರಮುಖವಾದ ಹೆಸರು ವಿಶ್ವನಾಥ್‌ರವರದು. ಇಲ್ಲಿನ ಕೆಲವು ಕನ್ನಡ ಸಾಹಿತ್ಯಾಸಕ್ತರೊಂದಿಗೆ ಸೇರಿ, 2001 ರ ನವೆಂಬರ್‌ನಲ್ಲಿ ಹುಲಿಕಲ್ ದಂಪತಿಗಳು ಕನ್ನಡ ಸಾಹಿತ್ಯ ಸಂಬಂಧಿ ಚರ್ಚೆಗೆಂದು ಹುಟ್ಟು ಹಾಕಿದ್ದು ‘ಸಾಹಿತ್ಯ ಗೋಷ್ಠಿ’. ಅಲ್ಲಿಂದ ಇಲ್ಲಿಯವರೆಗೂ ನಿಯಮಿತವಾಗಿ ತಿಂಗಳಿಗೊಂದು ಕಾರ್ಯಕ್ರಮದಂತೆ ಇದನ್ನು ನಡೆಸಿಕೊಂಡು ಬಂದಿದ್ದಾರೆ. ಜನ್ನ, ಕುಮಾರವ್ಯಾಸ, ಕುವೆಂಪುರವರಿಂದ ಹಿಡಿದು [...]