ಕಾಲಕ್ಕಿಂತ ಮುಂದಿದ್ದ ದಾರ್ಶನಿಕರು…

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯಲ್ಲಿನ ಜುಲೈ 6 , 2007 ರ ಸಂಚಿಕೆಯಲ್ಲಿನ ಲೇಖನ) ಅವರನ್ನು ಭೇಟಿಯಾಗಿ, ಎರಡು-ಮೂರು ತಾಸು ಮಾತನಾಡಿ ಮೂರು ತಿಂಗಳೂ ಆಗಿರಲಿಲ್ಲ. ಅವತ್ತಿನ ಮಾತುಕತೆಯಲ್ಲಿ ಕರ್ನಾಟಕದಲ್ಲಿ ಇಲ್ಲವಾಗುತ್ತಿರುವ ಸಾಂಸ್ಕೃತಿಕ ನಾಯಕತ್ವದ ಬಗ್ಗೆ, ಪ್ರಜಾಪ್ರಭುತ್ವದ ಬಗ್ಗೆ, ಸಾಮಾಜಿಕ ಸಾಮರಸ್ಯದ ಬಗ್ಗೆ ಮಾತನಾಡಿದ್ದೆವು. ತೇಜಸ್ವಿ, ಅನಂತಮೂರ್ತಿಯವರೆಲ್ಲ ಅಂದಿನ ಮಾತಿನಲ್ಲಿ ಬಂದಿದ್ದರು. ಅದಾದ ಒಂದು ವಾರಕ್ಕೆಲ್ಲ ತೇಜಸ್ವಿಯವರು ತೀರಿ ಹೋದರು. ಅನಂತಮೂರ್ತಿಯವರು ಒಂದು ರೀತಿಯಲ್ಲಿ liability ಆಗುತ್ತ ಹೋಗುತ್ತಿದ್ದಾರೆ. ಈಗ ರಾಮದಾಸರೂ ಇಲ್ಲ. ಫ್ರೊ. ರಾಮದಾಸರ ಬಗ್ಗೆ ಬರೆಯುವುದಕ್ಕಿಂತ [...]

ಸ್ವಾಮಿ ಮತ್ತು ಮಹಮ್ಮದ್ ಹಾಗೂ ಟ್ಯಾಬ್ಲಾಯ್ಡ್ ದಿನಪತ್ರಿಕೆಗಳು

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯಲ್ಲಿನ ಜೂನ್ 29, 2007 ರ ಸಂಚಿಕೆಯಲ್ಲಿನ ಲೇಖನ) ಕಳೆದ ಮೂರು ವರ್ಷಗಳಿಂದ ಆತ್ಮೀಯ ಸ್ನೇಹಿತರಲ್ಲೊಬ್ಬರಾಗಿದ್ದ, ಕನ್ನಡ, ಕರ್ನಾಟಕದ ಸ್ಥಿತಿಗತಿಗಳ ಬಗ್ಗೆ ಗಂಟೆಗಟ್ಟಲೆ ಮಾತನಾಡುತ್ತಿದ್ದ, ತಂತ್ರಜ್ಞಾನ ಕ್ಷೇತ್ರದಲ್ಲಿ ಪೇಟೆಂಟ್‌ಗಳನ್ನೂ ಗಳಿಸಿ ನಮ್ಮ ನಡುವೆಯ ಮೇಧಾವಿ ಎನಿಸಿದ್ದ ಆಪ್ತ ಸ್ನೇಹಿತ ಸ್ವಾಮಿ ಇದೇ ತಿಂಗಳು ಭಾರತಕ್ಕೆ ಹಿಂದಿರುಗುತ್ತಿದ್ದಾರೆ. ಜನಾರ್ಧನ ಸ್ವಾಮಿ ನನ್ನ ಹಾಗೆಯೆ ಹಳ್ಳಿಯಿಂದ ಬಂದವರು. ದಾವಣಗೆರೆಯ ಹತ್ತಿರದ ಹಳ್ಳಿ ಅವರದು. ಹತ್ತನೆ ತರಗತಿಯ ತನಕ ಓದಿದ್ದೆಲ್ಲ ಹಳ್ಳಿಯಲ್ಲಿಯೆ. ದಾವಣಗೆರೆಯ BDT ಯಲ್ಲಿ B.E. ಮಾಡಿ, [...]

ಹತ್ತು ಸಾವಿರ ಜನರಲ್ಲಿ ಒಬ್ಬರೂ ಕೈಎತ್ತಿಲ್ಲ!!!

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯಲ್ಲಿನ ಜೂನ್ 22, 2007 ರ ಸಂಚಿಕೆಯಲ್ಲಿನ ಲೇಖನ) ಇತ್ತೀಚಿನ ದಿನಗಳಲ್ಲಿ ಬಹಳ ಚರ್ಚಿತವಾಗುತ್ತಿರುವ ಕನ್ನಡ ಪುಸ್ತಕಗಳಲ್ಲಿ ಡಾ. ಬಂಜಗೆರೆ ಜಯಪ್ರಕಾಶರ “ಆನು ದೇವಾ ಹೊರಗಣವನು” ಸಹ ಒಂದು. ಬಂಜಗೆರೆಯವರು “ಕನ್ನಡ ರಾಷ್ಟ್ರೀಯತೆ” ಎಂಬ ವಿಷಯಕ್ಕೆ ಹಂಪಿ ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪಡೆದಿದ್ದಾರೆ. ಕರ್ನಾಟಕದಾದ್ಯಂತ ಅನೇಕ ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಇವರು ಕವಿಯೂ ಹೌದು. ಕಳೆದ ವರ್ಷವೆ ಒಂದು ಕವನ ಸಂಕಲನವನ್ನೂ ಬಿಡುಗಡೆ ಮಾಡಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ದಾವಣಗೆರೆ [...]

ಆಂಧ್ರದ ಜಯಪ್ರಕಾಶ್ ನಾರಾಯಣ್, ಬೆಂಗಳೂರಿನ ರಮೇಶ್

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯಲ್ಲಿನ ಜೂನ್ 15, 2007 ರ ಸಂಚಿಕೆಯಲ್ಲಿನ ಲೇಖನ) ಇಂದಿರಾ ಗಾಂಧಿಯ ಎಮರ್ಜೆನ್ಸಿ ಕಾಲ ಅದು. ಆ ಹುಡುಗ ಓದಿದ್ದು ಎಮ್.ಬಿ.ಬಿ.ಎಸ್. ಆಂಧ್ರದ ಗುಂಟೂರಿನ ಆ ಹುಡುಗನ ಸಹಪಾಠಿಗಳೆಲ್ಲ ಅಮೇರಿಕಕ್ಕೆ ಹೋಗಲು ತುದಿಗಾಲ ಮೇಲೆ ನಿಂತಿದ್ದರೆ, ಈತ ಐ.ಎ.ಎಸ್. ಬರೆಯಲು ಕುಳಿತ. 1980 ರಲ್ಲಿ ಇಡೀ ಭಾರತಕ್ಕೆ ನಾಲ್ಕನೆ ರ್‍ಯಾಂಕ್ ಪಡೆದು ಆಂಧ್ರ ಕೇಡರ್‌ನ ಐ.ಎ.ಎಸ್. ಅಧಿಕಾರಿಯಾಗಿ ಆಯ್ಕೆಯಾದ. ಆತನಿಗೆ ಹೆತ್ತವರು ಇಟ್ಟಿದ್ದ ಹೆಸರು ಸ್ವಾತಂತ್ರ್ಯ ಹೋರಾಟಗಾರ, ಲೋಕನಾಯಕ ಜಯಪ್ರಕಾಶ್ ನಾರಾಯಣ್‌ರದು. ಡಾ. ಜೇಪಿ [...]