ಬಹಿರಂಗ ಕಾಮಕೇಳಿಯಲ್ಲಿ ಜನ ಮತ್ತು ರಾಜಕಾರಣಿಗಳು – ಛೇ… ಛೀ… ಥೂ… ಅಯ್ಯೋ…

ಕಳೆದ ಹಲವಾರು ವಾರಗಳಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕಾರಣ ಕೇವಲ ಅರೆಮಬ್ಬಿನ ಕೋಣೆಯಲ್ಲಷ್ಟೆ ಕಾಣಸಿಗುವ ವಿಕೃತ ರಂಜನೆಯನ್ನು ಜನರಿಗೆ ಬಹಿರಂಗವಾಗಿ ನೀಡುತ್ತಿದೆ. ಆದರೆ ತಾವು ನೋಡುತ್ತಿರುವ ಈ ವ್ಯಭಿಚಾರದ ನಾಟಕ ತಾವೆ ಸೃಷ್ಟಿಸಿದ ಒಂದು ಅಂಕ ಮತ್ತು ಅದರಲ್ಲಿ ತಾವು, ತಮ್ಮ ಮನೆಯವರು, ತಮ್ಮ ಮುಂದಿನ ಪೀಳಿಗೆಯವರೂ ಪಾಲ್ಗೊಂಡಿದ್ದಾರೆ ಎನ್ನುವುದನ್ನು ಆ ಕ್ಷಣಿಕ ಉದ್ರೇಕೋನ್ಮತ್ತ ಸ್ಥಿತಿಯಲ್ಲಿ ಜನ ಮರೆತಿದ್ದಾರೆ. ಯಾವ ಪಕ್ಷಕ್ಕೂ ಬಹುಮತ ನೀಡದೆ, “ನೀನು ನಮ್ಮ ರಾಜ್ಯದ ಮುಖ್ಯಮಂತ್ರಿಯಾಗಲು ಯೋಗ್ಯ” ಎಂಬ ಸಂದೇಶವನ್ನು ಜನ ಯಾವೊಬ್ಬನಿಗೂ ನೀಡದೆ [...]

ಡಾಲರ್ ಎದುರು ರೂಪಾಯಿ ಬೆಲೆ ಹೆಚ್ಚಾಗಿದ್ದು ಒಳ್ಳೆಯದೊ, ಕೆಟ್ಟದ್ದೊ?

(ವಿಕ್ರಾಂತ ಕರ್ನಾಟಕ – ಅಕ್ಟೋಬರ್ 12/19, 2007 ರ ಸಂಚಿಕೆಯಲ್ಲಿನ ಬರಹ) 2003 ರ ಆದಿಭಾಗದಲ್ಲಿ 48 ರೂಪಾಯಿಗೆ ಒಂದು ಅಮೇರಿಕನ್ ಡಾಲರ್ ಸಿಗುತ್ತಿತ್ತು. ಆದರೆ ಇವತ್ತು 40 ರೂಪಾಯಿಗೇ ಒಂದು ಡಾಲರ್ ಸಿಗುತ್ತಿದೆ. ಪೆಟ್ರೋಲಿಯಮ್ ತೈಲ, ಯಂತ್ರೋಪಕರಣಗಳು, ರಸಗೊಬ್ಬರ, ರಾಸಾಯನಿಕ, ಮುಂತಾದವುಗಳನ್ನು ವಿದೇಶಗಳಿಂದ ಕೊಳ್ಳುವ ಭಾರತಕ್ಕೆ ಈ ಲೆಕ್ಕಾಚಾರದಲ್ಲಿ ಉಳಿತಾಯವೆ ಆಗುತ್ತಿದೆ. ಇದು ಯಾವ ಲೆಕ್ಕಾಚಾರದಲ್ಲಿ ಉಳಿತಾಯ ಎಂದು ತಿಳಿದುಕೊಳ್ಳಬೇಕಾದರೆ ಬೆಲೆಯಲ್ಲಿ ಏರಿಳಿತಗಳನ್ನು ಕಂಡಿರುವ ಅಂತರರಾಷ್ಟ್ರೀಯ ಉತ್ಪನ್ನಗಳನ್ನು ಬಿಟ್ಟು ಏರಿಳಿತಗಳನ್ನು ಕಂಡಿರದ ಒಂದು ವಸ್ತುವಿನ ಮೇಲೆ [...]

ಚೀನಾದಲ್ಲಿ ಜೀವಿಸಲು ಕಾರಣಗಳೆ ಇಲ್ಲವಂತೆ ?!

(ವಿಕ್ರಾಂತ ಕರ್ನಾಟಕ – ಅಕ್ಟೋಬರ್ 5, 2007 ರ ಸಂಚಿಕೆಯಲ್ಲಿನ ಬರಹ) “ಚೀನಾವನ್ನು ಸುತ್ತು ಹಾಕಿಕೊಂಡು ಬಂದರೆ ಅಲ್ಲಿ ಬದುಕಲು ಕಾರಣಗಳೇ ಇಲ್ಲ ಎನ್ನುವುದು ನಮಗೆ ಸ್ಪಷ್ಟವಾಗುತ್ತದೆ.” ಹೀಗೆಂದು ಸಾರಾಸಗಟಾಗಿ ಬರೆದ ವಾಕ್ಯವನ್ನು ಪ್ರಜಾವಾಣಿಯ ಸಾಪ್ತಾಹಿಕ ಪುರವಣಿಯ ಮೊದಲ ಪುಟದಲ್ಲಿ ನೋಡಿ ನಿಜಕ್ಕೂ ಗಾಬರಿಯಾಯಿತು. 132 ಕೋಟಿ ಜನರ, ಜನಸಂಖ್ಯೆಯ ದೃಷ್ಟಿಯಿಂದ ಪ್ರಪಂಚದಲ್ಲಿಯೆ ಅತಿ ದೊಡ್ಡ ದೇಶವಾದ ಚೀನಾದ ಅಷ್ಟೂ ಜನರನ್ನು ಕಾರಣಗಳಿಲ್ಲದ ಬದುಕುತ್ತಿರುವ ಜನ ಎಂದು ಭಾವಿಸುವುದು ಕೇವಲ ಅಮಾನವೀಯ ಮಾತ್ರವಲ್ಲ ಜೀವವಿರೋಧಿಯೂ ಸಹ, ಅಲ್ಲವೆ? [...]