ಪುನರ್ ಸ್ಥಾಪಿಸಬೇಕಿದೆ ಮೌಲ್ಯಗಳನ್ನು…

(ವಿಕ್ರಾಂತ ಕರ್ನಾಟಕ – ಡಿಸೆಂಬರ್ 07, 2007 ರ ಸಂಚಿಕೆಯಲ್ಲಿನ ಬರಹ) ಇದೇ ನವೆಂಬರ್ 24-25 ರಂದು ಕರ್ನಾಟಕದ ದೂರದರ್ಶನಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಲೋಕಾಯುಕ್ತರು ಮಾಡಿದೊಂದು ದಾಳಿಯದೆ ಸುದ್ದಿ. “ಶ್ರೀನಿವಾಸ ರೆಡ್ಡಿ ಎಂಬ ಸರ್ಕಾರಿ ನೌಕರ ತನ್ನ ಆದಾಯಕ್ಕೂ ಮೀರಿದ ಆಸ್ತಿಯನ್ನು ಹೊಂದಿದ್ದಾರೆ,” ಎಂದು ಲೋಕಾಯುಕ್ತರು ಬಹಿರಂಗ ಪಡಿಸಿದ ಆ ನೌಕರನ ಮತ್ತವರ ಹೆಂಡತಿಮಕ್ಕಳ ಆಸ್ತಿ ವಿವರ ಹೀಗಿದೆ: . ಮನೆಯಲ್ಲೇ ಪತ್ತೆಯಾದ ನಗದು ಹಣ ರೂ 33.7 ಲಕ್ಷ . ಬ್ಯಾಂಕ್ ಖಾತೆಗಳಲ್ಲಿರುವ ಹಣ 1 [...]

ವಿವೇಕಾನಂದರನ್ನು ಅಡಿಗಡಿಗೆ ಅವಮಾನಿಸಿದ ಯಡ್ಡಯೂರಪ್ಪ…

(ವಿಕ್ರಾಂತ ಕರ್ನಾಟಕ – ನವೆಂಬರ್ 30, 2007 ರ ಸಂಚಿಕೆಯಲ್ಲಿನ ಬರಹ) ಆಧುನಿಕ ಕನ್ನಡದ ಸರ್ವಶ್ರೇಷ್ಠ, ದಾರ್ಶನಿಕ ಮನಸ್ಸೊಂದು ಹೀಗೆ ದಾಖಲಿಸುತ್ತದೆ:“ನಮ್ಮ ರಾಜಕೀಯವಲಯದಲ್ಲಿಯೋ ಭವಿಷ್ಯನಿರ್ಣಯ ಮಾಡುವ ಜ್ಯೋತಿಷಿಗಳಿಗೆ ಪರಮಾಧಿಕಾರ ಲಭಿಸಿದಂತಾಗಿದೆ. ಅಧಿಕಾರಿ ತನ್ನ ಮೇಲ್ಮೆಯನ್ನು ಸಾಧಿಸಲು ಸೇವಾನಿಷ್ಠೆಯನ್ನು ಅನುಸರಿಸುವ ಕ್ಲೇಷಕ್ಕೆ ಹೋಗುವುದಿಲ್ಲ; ಜ್ಯೋತಿಷಿಯನ್ನೋ ಮಾಂತ್ರಿಕನನ್ನೋ ಆಶ್ರಯಿಸುತ್ತಾನೆ. ಮಂತ್ರಿ ತನ್ನ ರಾಜಕೀಯ ಭದ್ರತೆಯನ್ನು ಪ್ರಜಾಸತ್ತೆಯ ಋಜುನಿಯಮಗಳಿಂದ ಸ್ಥಾಪಿಸಿಕೊಳ್ಳುವ ‘ಅಭದ್ರ ವಿಜ್ಞಾನ’ಕ್ಕೆ ಬಿಟ್ಟುಕೊಡದೆ ಜ್ಯೋತಿಷಿಯ ‘ಸುಭದ್ರ ಅಜ್ಞಾನ’ಕ್ಕೇ ಶರಣು ಹೋಗುತ್ತಾನೆ. ಮಂತ್ರಿತ್ವ ವಹಿಸಿಕೊಳ್ಳುವ ಕಾಲನಿರ್ಣಯ ಮಾಡುವವನು ಜ್ಯೋತಿಷಿ. ಕೊನೆಗೆ ವಿಮಾನ [...]

ಬಾಬ್ಬಿ ಜಿಂದಾಲ್ – ಪಕ್ಕಾ ಕೆರಿಯರ್ ರಾಜಕಾರಣಿ

(ವಿಕ್ರಾಂತ ಕರ್ನಾಟಕ – ನವೆಂಬರ್ 23, 2007 ರ ಸಂಚಿಕೆಯಲ್ಲಿನ ಬರಹ) ಅಮೇರಿಕದಲ್ಲಿಯೆ ಹುಟ್ಟಿ ಬೆಳೆದ ಬಾಬ್ಬಿ ಜಿಂದಾಲ್ ಎಂಬ 36 ವರ್ಷದ ಯುವಕ ಅಮೇರಿಕದ ಲೆಕ್ಕಾಚಾರದಲ್ಲಿ ಹಿಂದುಳಿದ ರಾಜ್ಯವೆಂದು ಪರಿಗಣಿತವಾದ ಲೂಸಿಯಾನ ರಾಜ್ಯಕ್ಕೆ ಗವರ್ನರ್ ಆಗಿ ಒಂದೆರಡು ವಾರಗಳ ಹಿಂದೆ ಚುನಾಯಿಸಲ್ಪಟ್ಟ. ಆ ವಾರ್ತೆಯನ್ನು ಎಲ್ಲಾ ಮಾಮೂಲಿ ಸುದ್ದಿಗಳಂತೆ ರಾಯ್ಟರ್ಸ್, ಅಸ್ಸೊಸಿಯೇಟೆಡ್ ಪ್ರೆಸ್ ಮತ್ತಿತರ ಸುದ್ದಿ ಸಂಸ್ಥೆಗಳು ಪತ್ರಿಕಾಲಯಗಳಿಗೆ ಬಿಡುಗಡೆ ಮಾಡಿದವು. ಸಿಲಿಕಾನ್ ಕಣಿವೆ, ಹಾಲಿವುಡ್ ಮುಂತಾದ ವಿಶ್ವಪ್ರಸಿದ್ಧ ಸ್ಥಳಗಳನ್ನು ಹೊಂದಿರುವ, ಅಮೇರಿಕಾದಲ್ಲಿಯೆ ಅತ್ಯಂತ ಶ್ರೀಮಂತ [...]

ಯುದ್ಧ ಮತ್ತು ಶಾಂತಿ…

(ವಿಕ್ರಾಂತ ಕರ್ನಾಟಕ – ನವೆಂಬರ್ 16, 2007 ರ ಸಂಚಿಕೆಯಲ್ಲಿನ ಬರಹ) ಅದು 1811-1812 ನೆ ಇಸವಿಯ ಯೂರೋಪು. ನೆಪೊಲಿಯನ್ನನ ಕಾಲ. ರಷ್ಯ-ಫ್ರಾನ್ಸ್ ಒಕ್ಕೂಟದಿಂದ ಬೇರಾಗಲು ರಷ್ಯ ಬಯಸುತ್ತಿರುತ್ತದೆ. ಅದನ್ನು ಒಪ್ಪದ ಫ್ರಾನ್ಸ್‌ನ ನೆಪೊಲಿಯನ್ ರಷ್ಯಕ್ಕೆ ಬುದ್ಧಿ ಕಲಿಸಲು ಅದರ ಮೇಲೆ ದಾಳಿ ಮಾಡುತ್ತಾನೆ. ರಷ್ಯಾದ ಒಳಗೇ ಅನೇಕ ಕದನಗಳು ನಡೆಯುತ್ತವೆ. ನೆಪೊಲಿಯನ್ನನದು ದೊಡ್ಡ ಸೈನ್ಯ. ಆದರೂ ರಷ್ಯನ್ನರನ್ನು ಸಂಪೂರ್ಣವಾಗಿ ಸೋಲಿಸಲಾಗುವುದಿಲ್ಲ. ನೆಪೊಲಿಯನ್ನನ ಆಕ್ರಮಣ ತಪ್ಪಿಸಿಕೊಳ್ಳಲು ರಷ್ಯನ್ನರು ಮಾಸ್ಕೊ ತೊರೆದು ಗ್ರಾಮೀಣ ಪ್ರದೇಶಗಳಿಗೆ ಓಡಿ ಹೋಗುತ್ತಾರೆ. ಅಂತಿಮ [...]