(ವಿಕ್ರಾಂತ ಕರ್ನಾಟಕ – ಜನವರಿ 04, 2008 ರ ಸಂಚಿಕೆಯಲ್ಲಿನ ಬರಹ) ಓಹ್. ಎಂತಹ ಸುಂದರ ನಗು, ಆ ಮಗುವಿನದು. ಒಮ್ಮೊಮ್ಮೆ ತುಂಟನಂತೆ, ಒಮ್ಮೊಮ್ಮೆ ಮುಗ್ಧನಂತೆ ಕಾಣುತ್ತಾನೆ. ಇನ್ನೂ ಕೇವಲ ಐದು ವರ್ಷ ಅವನಿಗೆ. ಆಡುತ್ತಾ, ಪಾಡುತ್ತಾ ಬೆಳೆಯುತ್ತಿದ್ದಾನೆ. ತಾನು ಬೆಳೆದು ದೊಡ್ಡವನಾದ ಮೇಲೆ ಡಾಕ್ಟರಾಗುತ್ತೇನಮ್ಮ ಎಂದಿದ್ದಾನೆ ಅಮ್ಮನೊಂದಿಗೆ ಒಮ್ಮೆ. ಬಾಲವಾಡಿಗೆ (ಕಿಂಡರ್‌ಗಾರ್ಟನ್) ಹೋಗಲು ಏನೋ ಹುಮ್ಮಸ್ಸು ಅವನಿಗೆ. ಬೆಳಗ್ಗೆ ಅಮ್ಮನಿಗಿಂತ ಬೇಗ ಎದ್ದು ಅವಳನ್ನು ಎಬ್ಬಿಸಲು ಓಡುತ್ತಾನೆ. “ನಡಿಯಮ್ಮ, ಶಾಲೆಗೆ ಹೋಗೋಣ,” ಎನ್ನುತ್ತಾನೆ. ಸರಿಯಾಗಿ ವರ್ಷದ [...]
(ವಿಕ್ರಾಂತ ಕರ್ನಾಟಕ – ಡಿಸೆಂಬರ್ 28, 2007 ರ ಸಂಚಿಕೆಯಲ್ಲಿನ ಬರಹ) ಬೊಲಿವಿಯ ಎನ್ನುವುದು ದಕ್ಷಿಣ ಅಮೆರಿಕ ಖಂಡದಲ್ಲಿನ ಐದನೆ ದೊಡ್ಡ ದೇಶ. ಭೂವಿಸ್ತೀರ್ಣದಲ್ಲಿ ಕರ್ನಾಟಕದ ಎಂಟರಷ್ಟು ದೊಡ್ಡದಾದ ಈ ದೇಶದ ಜನಸಂಖ್ಯೆ ಸುಮಾರು 90 ಲಕ್ಷ. ಕಳೆದ ಶತಮಾನದಲ್ಲಿ ಮಿಲಿಟರಿಯ ನಿರಂಕುಶ ಆಡಳಿತ, ಭ್ರಷ್ಟಾಚಾರ ಮತ್ತು ಸಾಮ್ರಾಜ್ಯಶಾಹಿ ಪರಕೀಯರು ಅವಕಾಶ ಸಿಕ್ಕಿದಾಗಲೆಲ್ಲ ದೋಚಿದ ಪರಿಣಾಮವಾಗಿ ಈ ದೇಶ ದಕ್ಷಿಣ ಅಮೆರಿಕದಲ್ಲಿನ ಅತಿ ಬಡರಾಷ್ಟ್ರಗಳಲ್ಲಿ ಒಂದು. ಕಳೆದೆರಡು ದಶಕಗಳಿಂದ ಪ್ರಜಾಪ್ರಭುತ್ವ ಇದ್ದರೂ ಈಗಲೂ ಭ್ರಷ್ಟಾಚಾರ, ಹಿಂಸೆ, ಅರಾಜಕತೆ [...]
(ವಿಕ್ರಾಂತ ಕರ್ನಾಟಕ – ಡಿಸೆಂಬರ್ 21, 2007 ರ ಸಂಚಿಕೆಯಲ್ಲಿನ ಬರಹ) ಆ ರಾಜ್ಯದ ನಗರವೊಂದರಲ್ಲಿ ಆತನದೊಂದು ಸಣ್ಣ ಫ್ಯಾಕ್ಟರಿ ಇರುತ್ತದೆ. ಖರ್ಚು ಹೆಚ್ಚಾಗಿ ಲಾಭಾಂಶ ಕಡಿಮೆ ಆಗುತ್ತಿದ್ದ ಸಮಯ ಅದು. ಬಹಳ ದಿನಗಳಿಂದ ಸ್ಥಳೀಯರೇ ಕೆಲಸ ಮಾಡುತ್ತಿದ್ದರಿಂದ ಅವರಿಗೆ ಸಂಬಳಗಳೂ, ಖರ್ಚುಗಳೂ ಜಾಸ್ತಿ. ಆ ಸಮಯದಲ್ಲಿ ಮಾಲೀಕನಿಗೆ ದೂರದ ಊರಿನಲ್ಲಿ ಕಮ್ಮಿ ಬೆಲೆಗೆ ಕೂಲಿಯವರು ಸಿಗುತ್ತಾರೆ ಎಂದು ಯಾರೋ ಹೇಳುತ್ತಾರೆ. ಸರಿ. ಇವನು ಒಬ್ಬ ಮೇಸ್ತ್ರ್ರಿಗೆ ದುಡ್ಡು ಕೊಟ್ಟು ಆ ಊರಿನಿಂದ ಒಂದೈವತ್ತು ಜನರನ್ನು ಕರೆಸಿಕೊಳ್ಳುತ್ತಾನೆ. [...]
(ವಿಕ್ರಾಂತ ಕರ್ನಾಟಕ – ಡಿಸೆಂಬರ್ 14, 2007 ರ ಸಂಚಿಕೆಯಲ್ಲಿನ ಬರಹ) 1999. ಆಗಿನ್ನೂ ಕನ್ನಡ ಅಂತರ್ಜಾಲ ನಿಧಾನಕ್ಕೆ ಕಣ್ಣು ತೆರೆಯುತ್ತಿತ್ತು. ಇದ್ದದ್ದು ಬಹುಶಃ ಬೆರಳೆಣಿಕೆಯ ಕನ್ನಡ ವೆಬ್‌ಸೈಟುಗಳು. ಬರಹ ವಾಸುರವರು ಬರಹ ಕನ್ನಡ ಲಿಪಿ ತಂತ್ರಾಂಶವನ್ನು ಉಚಿತವಾಗಿ ಒದಗಿಸಲು ಆರಂಭಿಸಿದ್ದ ದಿನಗಳು ಅವು. ಅ ದಿನಗಳಲ್ಲಿ ದಕ್ಷಿಣಕನ್ನಡ ಮೂಲದ, ಕೊಂಕಣಿ ಮನೆಮಾತಿನ, ಮೈಸೂರಿನ ಯುವಕನೊಬ್ಬ ಜರ್ಮನಿಗೆ ಪ್ರಾಜೆಕ್ಟ್ ಒಂದಕ್ಕೆ ನಾಲ್ಕಾರು ತಿಂಗಳ ಕಾಲ ಹೋಗುತ್ತಾನೆ. ಅಲ್ಲಿ ಬಯಸಿದ್ದಕ್ಕಿಂತ ಹೆಚ್ಚಿನ ಬಿಡುವು. ಆ ಬಿಡುವಿನಲ್ಲಿ ಕನ್ನಡದ ವೆಬ್‌ಸೈಟು [...]