ಅನುವಾದಿತ ಸಣ್ಣ ಕತೆ: ಒಂದು ಜಾಹಿರಾತು

- ತೆಲುಗು ಮೂಲ: ಶಿವಂ (ಕೃಪೆ: ದಟ್ಸ್‌ತೆಲುಗು.ಕಾಂ) [ಮೊದಲು (ಜುಲೈ 25, 2003) ದಟ್ಸ್‌ಕನ್ನಡ.ಕಾಮ್‌ನಲ್ಲಿ ಪ್ರಕಟವಾಗಿತ್ತು. ಈಗ ಇಲ್ಲಿ.] “ಎಲ್ಲಿ ಒಂದು ನಗು ನಗಿ!” ದಿನಪತ್ರಿಕೆಯಲ್ಲಿನ ಒಂದು ಟೂತ್‌ಪೇಸ್ಟ್ ಜಾಹೀರಾತು ಕೇಳುತ್ತಿದೆ. ನಗು! ಎಷ್ಟು ದಿನಗಳಾದವು ಅವನು ನಕ್ಕು! ಬಹುಶಃ ಹದಿನೈದು ವರ್ಷವಾದರೂ ಆಗಿರಬೇಕು. ಹೌದು. ಹದಿನೈದು ವರ್ಷಗಳು. ಅವನಿಗೆ ಹದಿನೇಳು ಇದ್ದಾಗ ಶಾಲಾಮಾಸ್ತರ ಬಾಳೆಹಣ್ಣಿನ ಸಿಪ್ಪೆಯ ಮೇಲೆ ಜಾರಿ ಬಿದ್ದು ಬಿಟ್ಟ. ವೆಂಕಟರಾವು ಇರಬಹುದು, ಪಂಡಿತರನ್ನು ಹಿಡಿದು ನಿಲ್ಲಿಸಲು ಹೋದ. ಮಾಸ್ತರರು ಕ್ರೋಧದಿಂದ ವೆಂಕಟರಾವಿನ ಬೆನ್ನಿನ [...]

ನಂಜನಗೂಡಿನಲ್ಲಿ ನಿಗೂಢ ರಾತ್ರಿ

(KKNC ಯ 2005 ರ ಸ್ವರ್ಣಸೇತುವಿಗೆ ಬರೆದಿದ್ದ ಲೇಖನ. ಬ್ಲಾಗ್‌ಗೆ ಏರಿಸುತ್ತಿದ್ದೇನೆ.) ಮೊನ್ನೆ (2005 ರ) ಜೂನ್‌ನಲ್ಲಿ ಹೆಂಡತಿ ಮತ್ತು ಮಗುವಿನೊಂದಿಗೆ ಭಾರತದ ಪ್ರವಾಸ ಹೋಗಿದ್ದಾಗ ಸುಮಾರು ನಾಲ್ಕು ವಾರಗಳನ್ನು ನನ್ನದೇ ತರಲೆ ತಾಪತ್ರಯಗಳಲ್ಲಿ, ಬರಬಾರದ, ಬಯಸಬಾರದ ಅನುಭವ ಮತ್ತು ಕಷ್ಟಗಳಲ್ಲಿ ಕಳೆದೆ. ಒಳ್ಳೆಯ ಸಮಯ ಇರಲೇ ಇಲ್ಲ ಅಂತಲ್ಲ; ಬೆಲ್ಲಕ್ಕಿಂತ ಬೇವೇ ಹೆಚ್ಚಿತ್ತು. ಹಾಗಾಗಿ, ಉಳಿದ ಒಂದು ವಾರದಲ್ಲಾದರೂ ಒಂದೆರಡು ದಿನ ಮನೆಯವರೆಲ್ಲರ ಜೊತೆ ಎಲ್ಲಾದರೂ ಹೋಗಿಬರೋಣ ಎಂದು ಶನಿವಾರ ಮಧ್ಯಾಹ್ನ ನಮ್ಮ Scorpio ವ್ಯಾನಿನಲ್ಲಿ [...]

ಸಣ್ಣಕತೆ – ನಾನು, ಅವನು, ಮೋನಪ್ಪ.

[2004 ರ ಜನವರಿಯಲ್ಲಿ, ಅಂದರೆ ಸುಮಾರು ಐದು ವರ್ಷಗಳ ಹಿಂದೆ ಬರೆದ ಕಥೆ ಇದು. ಮೊದಲು ನನ್ನ ಪುಸ್ತಕದಲ್ಲಿ ಪ್ರಕಟವಾಗಿತ್ತು. 2003 ರ ಕೊನೆಯಲ್ಲಿ ಕರ್ನಾಟಕದ ಸಾಹಿತ್ಯಕ-ಸಾಂಸ್ಕೃತಿಕ ರಂಗದಲ್ಲಿ ನಡೆದ ಕೆಲವು ಘಟನೆಗಳು ಹಾಗೂ ನಿರಂಕುಶಮತಿಯಂತೆ ಕಾಣಿಸುತ್ತಿದ್ದ ಸ್ನೇಹಿತನೊಬ್ಬ ಹೇಳಿದ ಅಂಧಾಭಿಮಾನ ಎನ್ನಿಸಿದ ಮಾತು ಈ ಕಥೆಗೆ ಮೂಲ ಪ್ರೇರಣೆ. ಇದನ್ನು ಬರೆಯುವಾಗ ಈ ಕತೆ ಈಗ ಮಾತ್ರ ಪ್ರಸ್ತುತ ಎನ್ನಿಸುತ್ತಿತ್ತು. ಆದರೆ, ನಾಲ್ಕೈದು ವರ್ಷಗಳ ನಂತರವೂ ಇದು ಪ್ರಸ್ತುತವಾಗುತ್ತಲೆ ಹೋಗುತ್ತಿದೆ. ದಟ್ಸ್‌ಕನ್ನಡದಲ್ಲಿದ್ದ ಕೊಂಡಿ ಈಗ ಕೆಲಸ [...]