ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ…

ಇಂತಹದೊಂದು ವಿಶ್ವಾಸ ನನಗೆ ಮೊದಲಿನಿಂದಲೂ ಇತ್ತು. ಆರ್ಥಿಕ ಅಭಿವೃದ್ಧಿ ಕೊನೆಗೂ ತಳವರ್ಗಗಳನ್ನೂ, ಗ್ರಾಮಾಂತರವನ್ನೂ ಮುಟ್ಟುತ್ತದೆ ಮತ್ತು ಅದು ಕಾಲಾಂತರದಲ್ಲಿ ಅಂತರ್ಜಾಲದಲ್ಲೂ ಪ್ರತಿಬಿಂಬಿಸುತ್ತದೆ ಎನ್ನುವುದೇ ಆ ವಿಶ್ವಾಸ. ನಾನು ಬರೆಯಲಾರಂಭಿಸಿದ್ದು 2003 ರಲ್ಲಿ. ಆಗ ನನ್ನಂತಹ ವಿದೇಶದಲ್ಲಿದ್ದವನಿಗೆ ಕನ್ನಡದಲ್ಲಿ ಏನಾದರೂ ಬರೆದರೆ ಪ್ರಕಟಿಸುವ ಅವಕಾಶ ಇದ್ದದ್ದು ದಟ್ಸ್‌ಕನ್ನಡ ವೆಬ್‌ಸೈಟಿನಲ್ಲಿ. ಶಾಮಸುಂದರ್ ಮತ್ತವರ ಬಳಗ ನನ್ನಂತಹ ಅನೇಕ ಭಿನ್ನ ವೈಚಾರಿಕ ಹಿನ್ನೆಲೆ ಇರುವವರಿಗೆಲ್ಲ ವೇದಿಕೆ ಕೊಟ್ಟಿದ್ದರು. ಬಹುಶಃ, ಸಂವಾದಕ್ಕೆ ಆಸ್ಪದವಿದ್ದ ಮೊದಲ ಕನ್ನಡ ತಾಣ ಅದು. ಅಷ್ಟಿದ್ದರೂ, ಕನ್ನಡ ಅಂತರ್ಜಾಲ [...]

ಗಾಂಧೀಜಿಯ ಹಂತಕ-ಪಡೆ ವಿಶ್ರಮಿಸುವುದಿಲ್ಲ. ಭಾರತವೂ…

ಕರ್ನಾಟಕದ ಇವತ್ತಿನ ದೊಡ್ಡ ಸಮಸ್ಯೆ ಕೋಮುವಾದ ಎನ್ನುವುದು ನನ್ನ ನಂಬಿಕೆ. ಕಳೆದ ಹಲವಾರು ದಶಕಗಳಲ್ಲಿ ಕರ್ನಾಟಕ ಕಂಡ ರಾಜಕೀಯ-ಸಾಮಾಜಿಕ-ಸಾಂಸ್ಕೃತಿಕ ಪ್ರಗತಿಯನ್ನೆಲ್ಲ ಇವತ್ತಿನ ಕೋಮುವಾದ ನಾಶ ಮಾಡುತ್ತಿದೆ. ಆಧುನಿಕ ಶಿಕ್ಷಣ, ಪ್ರಜಾಪ್ರಭುತ್ವ ಮತ್ತು ಇತ್ತೀಚಿನ ಆರ್ಥಿಕ ಬೆಳವಣಿಗೆ ನಮ್ಮ ನೆಲದ ಅನೇಕ ಸಮಸ್ಯೆಗಳನ್ನು ಇಲ್ಲವಾಗಿಸುತ್ತಿದೆ. ಜನ, ಅವರ ಮನಸ್ಸು, ಅಭಿಪ್ರಾಯಗಳು ಹೆಚ್ಚುಹೆಚ್ಚು ಚಲನಶೀಲವೂ ಸಹನಶೀಲವೂ ಆಗುತ್ತಿದೆ. ದುಡಿದೇ ಬದುಕಬೇಕಾದ ಯುವಕ-ಯುವತಿಯರು ಸಂಕೋಲೆಗಳನ್ನು ಮತ್ತು ಸಂಕುಚಿತತೆಗಳನ್ನು ಕಳೆದುಕೊಳ್ಳುತ್ತಾ ನಡೆದಿದ್ದಾರೆ. ಆದರೆ ಹಳೆಯ ವ್ಯವಸ್ಥೆಯಿಂದ ಯಾರು ಯಾರು ಲಾಭ ಮಾಡಿಕೊಳ್ಳುತ್ತಿದ್ದರೊ ಅವರು [...]