ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ…

ಕುವೆಂಪು ಮೂಢನಂಬಿಕೆಗಳ, ಜಾತೀಯತೆಯ, ಪುರೋಹಿತಶಾಯಿಯ ಕಡುವಿರೋಧಿಯಾಗಿದ್ದವರು; ಕರ್ನಾಟಕ ಕಂಡ ಮಹಾನ್ ದಾರ್ಶನಿಕರು. ನಮ್ಮಲ್ಲಿ ಯಾರಾದರೂ ಇಂತಹ ವಿಷಯಗಳ ಬಗೆಗೆ ತಮ್ಮ ವಿರೋಧ ವ್ಯಕ್ತಪಡಿಸಿದರೆ ತಕ್ಷಣವೆ ಆತ ಹಿಂದೂವಿರೋಧಿ ಅಥವ ಬ್ರಾಹ್ಮಣವಿರೋಧಿ ಎಂದು ಬ್ರ್ಯಾಂಡ್ ಮಾಡುವ ದುಷ್ಟಪರಂಪರೆ ಒಂದಿದೆ. ಕುವೆಂಪುರವರ ಬಗ್ಗೆಯೂ ಬ್ರಾಹ್ಮಣವಿರೋಧಿ ಎಂಬ ಆರೋಪವಿತ್ತು. ಈ ವಿಚಾರದಲ್ಲಿ ಕುವೆಂಪುರವರ ಅಭಿಪ್ರಾಯ ಏನಿತ್ತು ಎನ್ನುವುದಕ್ಕೆ ನೀವು ವಿಚಾರಮಂಟಪ.ನೆಟ್‌ ನಲ್ಲಿರುವ ಅವರ “ವಿಚಾರ ಕ್ರಾಂತಿಗೆ ಆಹ್ವಾನ”ದ ಲೇಖನಗಳನ್ನು ನೋಡಬಹುದು. ಅದರಲ್ಲಿ ತಾವು ಪೂಜಿಸುವ ಮತ್ತು ಗೌರವಿಸುವ ಇಬ್ಬರು ಮಹಾನ್ ವ್ಯಕ್ತಿಗಳು [...]

ತಲ್ಲಣದ ಸಮಯದಲ್ಲಿ ಸಜ್ಜನಿಕೆ ಮತ್ತು ಪ್ರೀತಿಯನ್ನು ಹುಡುಕುತ್ತಾ…

2001, ಸೆಪ್ಟೆಂಬರ್ 11 ರ ದಾಳಿ ಆದನಂತರ ಇಲ್ಲಿಯವರೆಗೆ ಅಮೆರಿಕದ ನೆಲದಲ್ಲಿ ಯಾವೊಂದು ಭಯೋತ್ಪಾದಕ ದಾಳಿಗಳೂ ಆಗಿಲ್ಲ. ಈ ಮಧ್ಯೆ ಅಮೆರಿಕ ನ್ಯಾಯಯುತವಾಗಿಯೆ ಅಫ್ಘಾನಿಸ್ತಾನಕ್ಕೆ ನುಗ್ಗಿದ್ದಷ್ಟೆ ಅಲ್ಲದೆ ಅಪಾರ ವಿರೋಧದ ನಡುವೆ ಇರಾಕಿಗೂ ನುಗ್ಗಿತು. ಇದು ಇಸ್ಲಾಮಿಕ್ ಮೂಲಭೂತವಾದಿ ಭಯೋತ್ಪಾದಕರಲ್ಲಿ ದ್ವೇಷವನ್ನು ಮತ್ತಷ್ಟು ಹೆಚ್ಚಿಸಿತು. ಆದರೂ ಅಮೆರಿಕದ ನೆಲದ ಮೇಲೆ ಮತ್ತೆ ದಾಳಿ ಮಾಡಲು ಅವರ ಕೈಯ್ಯಲ್ಲಿ ಸಾಧ್ಯವಾಗಿಲ್ಲ. ಅಂದರೆ ಅವರು ಪ್ರಯತ್ನಿಸಲಿಲ್ಲ ಅಂತಲ್ಲ. ಅವರು ಪ್ರಯತ್ನಪಟ್ಟರೆ ಎನ್ನುವುದೂ ತಿಳಿಯದಷ್ಟು ಸೂಕ್ಷ್ಮವಾಗಿ ಅಮೆರಿಕದ ಭದ್ರತಾ ದಳಗಳ Intelligence [...]

ಅಯ್ಯೋ..ನನ್ನ ದೇಶವೇ…

ಕಳೆದ ರಾತ್ರಿ ಸ್ನೇಹಿತರೊಬ್ಬರು “Chennai Law College” ಎಂಬ ವಿಷಯ ಇದ್ದ ಇಮೇಯ್ಲ್ ಕಳುಹಿಸಿದ್ದರು. ಒಳಗೆ ಒಂದು ಪದವೂ ಇರಲಿಲ್ಲ, ಸುಮಾರು 6 MB ಯ ವಿಡಿಯೊ ಫೈಲ್ ಮಾತ್ರ ಅಟ್ಯಾಚ್ ಮಾಡಲಾಗಿತ್ತು. ಏನಿದು, ಏನಾದರೂ ಸ್ಪ್ಯಾಮ್ ಇರಬಹುದೆ ಎನ್ನಿಸಿತು. ನೋಡೋಣ ಎಂದು ಅದನ್ನು ತೆರೆದೆ. ಆಗ ರೂಮಿನಲ್ಲಿ ಲೈಟ್ ಆರಿಸಿತ್ತು. ಮಗಳನ್ನು ನನ್ನ ಹೆಂಡತಿ ಕತೆ ಹೇಳುತ್ತ ಮಲಗಿಸುತ್ತಿದ್ದಳು. ಮಲಗುತ್ತಿರುವ ಮಗುವಿಗೆ ಡಿಸ್ಟರ್ಬ್ ಆಗಬಾರದೆಂದು ಸ್ಪೀಕರ್ ಆನ್ ಮಾಡದೆ, ಕೇವಲ ಮೂಕಿ ವಿಡಿಯೊ ನೋಡಿದೆ. ಮೌನದಲ್ಲಿ, [...]

ಮೊಬೈಲ್‍ನಿಂದ ಪಂಪ್‌ಸೆಟ್ ನಿಯಂತ್ರಣ ಮತ್ತು ಜನಾರ್ಧನ ಸ್ವಾಮಿ

ಹವ್ಯಾಸಿ ವ್ಯಂಗ್ಯಚಿತ್ರಕಾರರೂ, ಉತ್ತಮ ಗ್ರಾಫಿಕ್ ವಿನ್ಯಾಸಕಾರರೂ, ಮತ್ತು ಚಿಪ್ ಡಿಸೈನಿಂಗ್‌ ಕ್ಷೇತ್ರದಲ್ಲಿ ಒಂದು ಪ್ಯಾಟೆಂಟ್ ಪಡೆದಿರುವವರೂ ಆದ ಗೆಳೆಯ ಜನಾರ್ಧನ ಸ್ವಾಮಿ ನನಗೆ ಮೊದಲು ಪರಿಚಯವಾದದ್ದು 2004 ರಲ್ಲಿ; ನಾನು ಉತ್ತರ ಕ್ಯಾಲಿಫೋರ್ನಿಯ ಕನ್ನಡ ಕೂಟದ ಕಾರ್ಯದರ್ಶಿಯಾಗಿದ್ದಾಗ. ಅಲ್ಲಿಂದೀಚೆಗೆ ಕನಿಷ್ಠ ಹತ್ತಿಪ್ಪತ್ತು ಬಾರಿಯಾದರೂ (ಅಕ್ಷರಶಃ!) ಸ್ವಾಮಿ ಮೊಬೈಲ್ ಫೋನಿನಿಂದ ಅಥವ ಅಂತಹುದೇ ವೈರ್‌ಲೆಸ್ ಉಪಕರಣದಿಂದ ಬೋರ್‌ವೆಲ್ ಮೋಟಾರುಗಳನ್ನು ನಿಯಂತ್ರಿಸುವ ಬಗ್ಗೆ ಹೇಳುತ್ತಲೇ ಬಂದಿದ್ದಾರೆ. ಹಳ್ಳಿಗಳಲ್ಲಿ ಬೋರ್‌‍‌ವೆಲ್ ಇಟ್ಟುಕೊಂಡು ಕೃಷಿ ಮಾಡುತ್ತಿರುವವರು ಕರೆಂಟ್ ಹೋಗಿಬಂದಾಗಲೆಲ್ಲ ತಮ್ಮ ಪಂಪ್‌‍ಸೆಟ್ ಇಟ್ಟಿರುವ [...]

ಈ ತಲೆಮಾರಿನ ಕನಸು ಮತ್ತು ಆದರ್ಶದ ಗಳಿಗೆ…

[ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇನ್ನೂ ಎರಡು ದಿನ ಇರುವಾಗ, ವಿಕ್ರಾಂತ ಕರ್ನಾಟಕದ ನವೆಂಬರ್ 14, 2008 ರ ಸಂಚಿಕೆಗೆ ಬರೆದ ಲೇಖನ.] “ಕರಿಯಗಂಡು, ಬಿಳಿಹೆಣ್ಣಿನ ಮಗನಾದ ಬರಾಕ್ ಹುಸೇನ್ ಒಬಾಮ ಎಂಬ ಸೆನೆಟರ್ ಮುಂದಿನ ಏಳೆಂಟು ವರ್ಷ ಅಂತಹ ದೊಡ್ಡ ತಪ್ಪುಗಳನ್ನು ಮಾಡದಿದ್ದರೆ ಈ ದೇಶದ ಅಧ್ಯಕ್ಷನೂ ಆಗಬಹುದು!” ಹಾಗೆಂದು ನಾನು ಬರೆದಿದ್ದು ವಿಕ್ರಾಂತ ಕರ್ನಾಟಕದ ಜುಲೈ 7, 2007 ರ ಸಂಚಿಕೆಯಲ್ಲಿ. ಕರ್ನಾಟಕದಲ್ಲಿ ಅಂತರ್ಜಾತಿ ವಿವಾಹಕ್ಕೆ ಅಪಾರ ಪ್ರೋತ್ಸಾಹ ಕೊಟ್ಟ ಮೈಸೂರಿನ ಚಿಂತಕ ರಾಮದಾಸರು ತೀರಿಕೊಂಡಾಗ [...]

ಭೈರಪ್ಪ, ಫ್ರೊ. ರಾಮದಾಸ್, ಮತ್ತು ಒಬಾಮ.

ಅಮೆರಿಕದಲ್ಲಿನ ಅಧ್ಯಕ್ಷೀಯ ಚುನಾವಣೆಗೆ ಕೇವಲ ಒಂದು ದಿನ ಮಾತ್ರ ಬಾಕಿಯಿದೆ. ಒಬಾಮ ಅಧ್ಯಕ್ಷನಾಗಿ ಚುನಾಯಿತನಾಗುವುದು ಈಗ a foregone conclusion. ಈ ಸಮಯದಲ್ಲಿ ಒಬಾಮ ಗೆಲ್ಲದಿದ್ದರೆ ಅದು ಅಮೆರಿಕದ ರಾಜಕೀಯ ಚರಿತ್ರೆಯಲ್ಲಿ ಒಂದು ಅತಿದೊಡ್ಡ upset ಆಗಲಿದೆ. ಅದು ಆಗುವ ಸಂಭವ ಕಮ್ಮಿ. ಹಾಗಾಗಿಯೇ, ಬಹಳಷ್ಟು ಪತ್ರಕರ್ತರು ಈಗಾಗಲೆ ಒಬಾಮ ಗೆದ್ದಿದ್ದಾನೆ ಎಂದೇ ಭಾವಿಸಿಬಿಟ್ಟಿದ್ದಾರೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಗೆಳೆಯ ಪ್ರೊ. ಪೃಥ್ವಿ ದತ್ತ ಚಂದ್ರ ಶೋಭಿ ಮತ್ತು ನಾನು ಓಕ್‌ಲ್ಯಾಂಡ್‌ನಲ್ಲಿ ಬರಾಕ್ ಒಬಾಮನ ಭಾಷಣ ಕೇಳಲು [...]