ಸರ್ಕಾರಿ ದುಡ್ಡು ಮತ್ತು ಬೇಕಾಬಿಟ್ಟಿ ಖರ್ಚು…

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ನವೆಂಬರ್ 7, 2008 ರ ಸಂಚಿಕೆಯಲ್ಲಿನ ಲೇಖನ.) ಕ್ಯಾಲಿಫೋರ್ನಿಯ ಜನಸಂಖ್ಯೆಯ ದೃಷ್ಟಿಯಲ್ಲಿ ಅಮೆರಿಕದ ಅತಿದೊಡ್ಡ ರಾಜ್ಯ. ಹಾಗೆಯೆ, ಉದಾರವಾದಿ, ಪ್ರಭಾವಶಾಲಿ, ಶ್ರೀಮಂತ ರಾಜ್ಯ ಸಹ. ಸಾಫ್ಟ್‌ವೇರ್ ಮತ್ತು ಇಂಟರ್ನೆಟ್ ತಂತ್ರಜ್ಞಾನ ಉತ್ತುಂಗಕ್ಕೆ ಏರುತ್ತಿದ್ದ 1999 ರ ಕಾಲದಲ್ಲಿ ಸಿಲಿಕಾನ್ ಕಣಿವೆಯ ಈ ರಾಜ್ಯವನ್ನು ಒಂದು ಸ್ವತಂತ್ರ ದೇಶವಾಗಿ ಪರಿಗಣಿಸಿದ್ದರೆ ಅದು ಪ್ರಪಂಚದ ಆರನೆಯ ಅಥವ ಏಳನೆಯ ಅತಿದೊಡ್ಡ ಆರ್ಥಿಕ ಶಕ್ತಿಯಾಗುತ್ತಿತ್ತು. ಆಗ 125 ಕೋಟಿ ಜನಸಂಖ್ಯೆಯ ಚೀನಾಕ್ಕಿಂತ ಕೇವಲ 3 ಚಿಲ್ಲರೆ ಕೋಟಿ [...]