ಮನುಷ್ಯ ಉಳಿಯಬೇಕಾದರೆ ಸಸ್ಯಾಹಾರದತ್ತ ತಿರುಗಬೇಕು…

ಈಗ ಓದುತ್ತಿರುವ ಗಾಂಧಿಯ ಪುಸ್ತಕದಲ್ಲಿ ಸಸ್ಯಾಹಾರದ ಬಗ್ಗೆ ಗಾಂಧಿ ಮಾಡಿದ ಕೆಲವು ಪ್ರಯೋಗಗಳು ಮತ್ತು ಅವರು ಲಂಡನ್ನಿನಲ್ಲಿ ಓದುತ್ತಿರುವಾಗ ಸಸ್ಯಾಹಾರಿ ರೆಸ್ಟಾರೆಂಟ್‌ಗಳನ್ನು ಹುಡುಕಿಕೊಂಡು ಮೈಲುಗಟ್ಟಲೆ ನಡೆದೇ ಹೋಗುತ್ತಿದ್ದ ಚಿತ್ರಣವಿದೆ. ದೊಡ್ಡವನಾದ ಮೇಲೆ ಚೆನ್ನಾಗಿ ಮಾಂಸ ತಿನ್ನಬೇಕು; ಮಾಂಸ ತಿಂದು ಗಟ್ಟಿಯಾದರಷ್ಟೆ ಬ್ರಿಟಿಷರನ್ನು ದೇಶದಿಂದ ಹೊರಗಟ್ಟಲು ಸಾಧ್ಯ, ಎನ್ನುವ ಕಲ್ಪನೆಯೊಂದು ಗಾಂಧಿಯ ತಲೆ ಹೊಕ್ಕಿತ್ತು (ಹೇಳಬೇಕೆಂದರೆ, ಹೊಕ್ಕಿಸಲ್ಪಟ್ಟಿತ್ತು, ಅವರ ಬಾಲ್ಯ ಸ್ನೇಹಿತನೊಬ್ಬನಿಂದ). ಆದರೆ ತನ್ನ ತಾಯಿಗೆ (ಒತ್ತಾಯಪೂರ್ವಕವಾಗಿ) ಕೊಟ್ಟಿದ್ದ ವಚನದಿಂದಾಗಿ ಲಂಡನ್ನಿನಲ್ಲಿ ಸಸ್ಯಾಹಾರಿಯಾಗಿಯೇ ಕಾಲತಳ್ಳಬೇಕಿದ್ದ ಅಗತ್ಯ ಅಥವ ದರ್ದು [...]

ನಿಮ್ಮಗಳ ನಿಷ್ಠೆಯೂ ಭಾರತಕ್ಕಿಲ್ಲ

(ಗುಜರಾತಿನ ಧೇಡ್ ಜಾತಿಗೆ ಸೇರಿದ) ದಲಿತ ಕುಟುಂಬವೊಂದು ಮೊದಲ ಬಾರಿಗೆ ಸತ್ಯಾಗ್ರಹ ಆಶ್ರಮದಲ್ಲಿ ಇರಲು ಬಂದಾಗ ಅದನ್ನು ಕಸ್ತೂರಬಾ ಸಹ ಒಪ್ಪಿಕೊಂಡಿರಲಿಲ್ಲ. ಆಫ್ರಿಕಾದಲ್ಲಿದ್ದಾಗ ಇಂತಹುದಕ್ಕೆ ಅಷ್ಟೇನೂ ವಿರೋಧ ತೋರಿಸದಿದ್ದ ಕಸ್ತೂರಬಾಗೆ ಇಲ್ಲಿ ಸರೀಕರ ಮುಂದೆ ದಲಿತರನ್ನು ಮುಟ್ಟಿಕೊಳ್ಳುವುದು ಅಥವ ಅವರನ್ನು ಪಕ್ಕದಲ್ಲಿಟ್ಟುಕೊಳ್ಳುವುದು ಬಹಳ ಕಷ್ಟವಾಗಿರಬೇಕು. ಆದರೆ ಯಾವಾಗ ಗಾಂಧಿ ‘ನಿನಗೆ ಅದು ಅಸಾಧ್ಯವಾದರೆ ನನ್ನನ್ನು ಬಿಟ್ಟು ಹೋಗಬಹುದು. ನಾವಿಬ್ಬರೂ ಒಳ್ಳೆಯ ಸ್ನೇಹಿತರಾಗಿ ಬೇರೆಯಾಗೋಣ,’ ಎಂದರೊ ಕಸ್ತೂರಬಾ ಅದಕ್ಕೆ ಮಣಿದರು. ಆದರೆ, ಅವರಿಗೆ ತುಂಬ ಹತ್ತಿರವಾಗಿದ್ದ ಮಗನ್‍ಲಾಲ್ (ಗಾಂಧಿಯ [...]

ಗಾಂಧಿ, ಸಾವರ್ಕರ್, ಪ್ರಚೋದಕರು…

ಈಗ ಓದುತ್ತಿರುವ “Gandhi – The Man, His People, and the Empire” ನಲ್ಲಿ ಲೇಖಕ ರಾಜ್‌ಮೋಹನ್ ಗಾಂಧಿ, ಸಾವರ್ಕರ್ ಮತ್ತು ಮೋಹನ್‌ದಾಸ್ ಗಾಂಧಿಯ ನಡುವಿನ ಎರಡು ಭೇಟಿಗಳ ಬಗ್ಗೆ ಬರೆಯುತ್ತಾರೆ. ಆ ಭಾಗಗಳನ್ನು ಓದುವ ಒಂದೆರಡು ದಿನಗಳ ಹಿಂದೆಯಷ್ಟೆ ನಾನು ಇಲ್ಲಿ ಒಬ್ಬ ಮಂಡ್ಯದ ಯುವಕನನ್ನು ಭೇಟಿಯಾಗಿದ್ದೆ. ಬುದ್ಧಿವಂತ. ಸಂಸ್ಕೃತ, ಕನ್ನಡ, ಇಂಗ್ಲಿಷ್ ಎಲ್ಲಾ ಓದುತ್ತಾನೆ. ಅಲ್ಲಿ ಹತ್ತಾರು ವರ್ಷಗಳ ಕಾಲ ಸಾವರ್ಕರ್ ಪ್ರಣೀತ ಹಿಂದೂ ಮತೀಯವಾದಿಗಳ ಅಂಗಳದಲ್ಲೂ ಓಡಾಡಿದ್ದಾನೆ. ಆತನ ಜೊತೆ ಮಾತನಾಡುತ್ತಿದ್ದಾಗ [...]

ಶತಮಾನದ ಹಿಂದೆ ಗಾಂಧಿ ಹೇಳಿದ್ದು…

ವಿಚಾರ ಮಂಟಪದ basic ಕೆಲಸ ಮುಗಿದ ತಕ್ಷಣ, ಈ ಒಂದು ಮೂರು ದಿನದಿಂದ ಗಾಂಧಿಯ ಮೊಮ್ಮಗ ರಾಜ್‌ಮೋಹನ್ ಗಾಂಧಿ ಬರೆದಿರುವ “Gandhi – The Man, His People, and the Empire” ಹಿಡಿದುಕೊಂಡು ಕುಳಿತಿದ್ದೇನೆ. ನನಗೆ ನಾನೆ ಮನನ ಮಾಡಿಕೊಳ್ಳುವುದು, ಗುರುತು ಮಾಡಿಕೊಳ್ಳುವುದು ಬಹಳಷ್ಟು ಇದೆ. ಲೈಬ್ರರಿ ಕಾಪಿ ಎಂದು ಸುಮ್ಮನಾಗುತ್ತೇನೆ. ಸಾಧ್ಯವಾದಾಗ ಇಲ್ಲಿಯೇ ಬರೆದುಕೊಳ್ಳಬೇಕು ಎನ್ನಿಸುತ್ತದೆ. ಈಗ ಅಂತಹುದೊಂದು. ಸರಿಯಾಗಿ 100 ವರ್ಷದ ಹಿಂದೆ ಗಾಂಧಿ ಮೊದಲ ಬಾರಿಗೆ ಜೈಲಿಗೆ ಹೋಗಿದ್ದು (1908 ರ [...]

"ವಿಚಾರ ಮಂಟಪ"ಕ್ಕೆ ಸಹಾಯ ಬೇಕಿದೆ…

ವಿಚಾರ ಮಂಟಪ ವನ್ನು ಯೂನಿಕೋಡ್‌ಗೆ ಬದಲಾಯಿಸಿ ಹೊಸರೂಪ ನೀಡಬೇಕೆಂದುಕೊಂಡಿದ್ದ ಕೆಲಸ ಅಂದುಕೊಂಡದ್ದಕ್ಕಿಂತ ನಿಧಾನವಾಗುತ್ತಿದೆ. ಈಗಾಗಲೆ ಅರ್ಧ ಕೆಲಸ ಮಾಡಿದ್ದೇನೆ. ಅದಕ್ಕೆ Drupal ವ್ಯವಸ್ಥೆ ಏರಿಸಿ ಆಗಿದೆ. ಹಾಗೆಯೆ “ವಚನಗಳು” ಮತ್ತು “ಕುವೆಂಪು” ವಿಭಾಗವನ್ನೂ ಪೂರ್ಣಗೊಳಿಸಿದ್ದೇನೆ. http://www.vicharamantapa.net/drupal ಇನ್ನೂ ಡಾ. ಹೆಚ್. ನರಸಿಂಹಯ್ಯನವರ ‘ಹೋರಾಟ ಹಾದಿ”ಯ ಲೇಖನಗಳು, ಬಿ.ವಿ. ವೀರಭದ್ರಪ್ಪನವರ “ವೇದಾಂತ ರೆಜಿಮೆಂಟ್” ಲೇಖನಗಳು, ಸಿದ್ದಲಿಂಗಯ್ಯನವರ “ಆಯ್ದ ಪದ್ಯಗಳು” ಅನ್ನು ಬದಲಿಸಬೇಕಿದೆ. ಇತ್ತೀಚಿನ ವ್ಯಸ್ತ ವೇಳೆಯಿಂದಾಗಿ ಅದಕ್ಕೆ ಬೇಕಾದ ದಿನಂಪ್ರತಿ ಒಂದೆರಡು ಗಂಟೆಗಳ ಸಮಯ ಸಿಗುತ್ತಿಲ್ಲ. ಸಿಕ್ಕರೂ ಮನಸ್ಥಿತಿ [...]

ಗಾಂಧಿ ಜಯಂತಿ ಕಥಾಸ್ಪರ್ಧೆ ಫಲಿತಾಂಶ

ನಾನು “ವಿಕ್ರಾಂತ ಕರ್ನಾಟಕ”ದ ಮೂಲಕ ಪ್ರಾಯೋಜಿಸಿದ್ದ “ಗಾಂಧಿ ಜಯಂತಿ ಕಥಾಸ್ಪರ್ಧೆ“ಯ ಫಲಿತಾಂಶ ಪತ್ರಿಕೆಯ ಈ ವಾರದ ಸಂಚಿಕೆಯಲ್ಲಿ ಪ್ರಕಟವಾಗಿದೆ. ಲೇಖಕ ಡಿ.ಎಸ್. ನಾಗಭೂಷಣ್, ಕಾದಂಬರಿಗಾರ್ತಿ ಡಾ. ಎಚ್. ನಾಗವೇಣಿ, ಮತ್ತು ಕವಿ ಸವಿತಾ ನಾಗಭೂಷಣ್‍ರವರು ತೀರ್ಪುಗಾರರಾಗಿ ಕತೆಗಳನ್ನು ಪರಿಶೀಲಿಸಿ, ಫಲಿತಾಂಶ ಮತ್ತು ತಮ್ಮ ಅಭಿಪ್ರಾಯವನ್ನು ಈ ರೀತಿ ವ್ಯಕ್ತಪಡಿಸಿದ್ದಾರೆ. ಈ ಹಿರಿಯ ಮಿತ್ರರಿಗೆ ನನ್ನ ಧನ್ಯವಾದಗಳನ್ನು ತಿಳಿಸುತ್ತೇನೆ. ಹಾಗೆಯೆ, ಈ ಕಥಾಸ್ಪರ್ಧೆ ಆಯೋಜಿಸಲು ಸಹಕರಿಸಿದ ಮತ್ತು ನಡೆಸಿಕೊಟ್ಟ “ವಿಕ್ರಾಂತ ಕರ್ನಾಟಕ”ದ ಸಂಪಾದಕೀಯ ಮಂಡಳಿಗೂ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ. [...]