ವಿಜಯ ಕರ್ನಾಟಕದ ಹೊಗಳು ಭಟ್ಟರು

ಕಳೆದ ಮೂರು ವಾರಗಳಿಂದ ಕರ್ನಾಟಕದ ಸುಮಾರು ಅರ್ಧ ಜಿಲ್ಲೆಗಳಲ್ಲಿ ಸುತ್ತಿದ ದೈಹಿಕ ಆಯಾಸ ಇನ್ನೂ ಹೋಗಿಲ್ಲ. ಅದರ ಜೊತೆಗೆ ಜೆಟ್ ಲ್ಯಾಗ್ ಸಮಸ್ಯೆ. ನಾಳೆ ಮತ್ತೆ ಪ್ರಯಾಣ ಹೊರಡಬೇಕಿದೆ, ಮೂರು ದಿನದ ಮಟ್ಟಿಗೆ. ವಾರಾಂತ್ಯದವರೆಗೆ ಮತ್ತೆ ಬಿಡುವಿಲ್ಲ. ಕಳೆದ ಎರಡು ಭಾನುವಾರಗಳಲ್ಲೂ ವಿಜಯ ಕರ್ನಾಟಕದಲ್ಲಿ ನನ್ನನ್ನು ಹೊಗಳಿ ಬರೆದಿದ್ದರು. ಹೊಗಳುವುದು ಅಂದರೆ ಗೊತ್ತಲ್ಲ; ಸುಳ್ಳು ಮತ್ತು ಉತ್ಪ್ರೇಕ್ಷೆ ಸಹಜ. ಅದರ ಜೊತೆಗೆ “ನೂರೆಂಟು ಸುಳ್ಳು” ಸೇರಿಕೊಂಡರೆ ಇನ್ನೂ ಭರ್ಜರಿಯಾಗಿರುತ್ತದೆ. ಇಂತಹುದೊಂದು ಹೊಗಳಿಕೆಗಳಿಗೆ ಸಾರ್ವಜನಿಕವಾಗಿ ಸಕ್ರಿಯರಾಗಿರುವವರು ಸದಾ ಸಿದ್ಧರಾಗಿರಬೇಕಾಗುತ್ತದೆ. [...]

ಕರ್ನಾಟಕದೊಳಗೊಂದು ಸುತ್ತು – ಭೀಕರ, ಭಯ, ಪ್ರೀತಿ, ಬಡತನ, ಜಾತೀಯತೆ…

ಕಳೆದ ಎರಡು ವಾರಗಳಿಂದ ಕರ್ನಾಟಕದ ಹಲವು ಕಡೆ ಮೂರು ಸುತ್ತು ಹಾಕಿದೆ. ಮುಂದೆ ಏನಾದರೂ ಬರೆಯಬೇಕಾಗಿ ಬಂದಾಗ ಮತ್ತು ನೆನಪು ಕೈಕೊಟ್ಟಾಗ ಈ ಬರಹ ಅನುಕೂಲವಾಗಲಿ ಎಂದು ನಾನು ಕ್ರಮಿಸಿದ ಮಾರ್ಗವನ್ನು ಇಲ್ಲಿ ದಾಖಲಿಸುತ್ತಿದ್ದೇನೆ. ಮೊದಲ ಮಾರ್ಗ: ಬೆಂಗಳೂರು-ತುಮಕೂರು-ಶಿರಾ-ಬೆಂಗಳೂರು. (ಈ ಮಾರ್ಗದಲ್ಲಿ ತುಮಕೂರಿನ ಶಿರಾ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕು ಮತ್ತು ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಕೆಲವು ಭಾಗಗಳಲ್ಲಿ ಓಡಾಟ.) ಇದು ಒಂದು ದಿನದ ಪ್ರಯಾಣ. ಹೈವೇಯನ್ನು ಬಿಟ್ಟು ಒಳರಸ್ತೆಗಳ ಹಳ್ಳಿಗಳೊಳಗಿನ ಈ ಪ್ರಯಾಣದಲ್ಲಿ ಭೀಕರ ಬಡತನವನ್ನೂ ಮತ್ತು [...]