ಲಿಂಗಾಯತ ಸಮಾವೇಶದಲ್ಲಿ ಆನು “ಹೊರಗಣವನು”

ನನ್ನ ಇನ್ನಿತರೆ ವ್ಯವಹಾರಗಳಲ್ಲಿ ವ್ಯಸ್ತನಾಗುವುದಕ್ಕಿಂತ ಮುಂಚೆ ಇದನ್ನು ಇಲ್ಲಿ ದಾಖಲಿಸೋಣ ಎಂದು ಬರೆಯುತ್ತಿದ್ದೇನೆ. ಕಳೆದ ವಾರ (ಜುಲೈ 3-4, 2010) ಕೆನಡಾದ ಟೊರಾಂಟೋದಲ್ಲಿ ಲಿಂಗಾಯತ (ಮತ್ತು/ಅಥವ ವೀರಶೈವ) ಸಮುದಾಯದ ಸಮಾವೇಶ ನಡೆಯಿತು. “ಉತ್ತರ ಅಮೆರಿಕದ ವೀರಶೈವ ಸಮಾಜ” ವರ್ಷಕ್ಕೊಮ್ಮೆ ನಡೆಸುವ ಸಮಾವೇಶ ಅದು. ಯಾವುದೇ ಜಾತಿಯ ಸಮಾವೇಶ ಅಥವ ಸಭೆಗಳಲ್ಲಿ ಪಾಲ್ಗೊಳ್ಳುವುದು ಜಾತ್ಯತೀತ ಮತ್ತು ಪ್ರಗತಿಪರ ನಿಲುವಿನ ಮತ್ತು ಬದ್ಧತೆಯ ಯಾರೊಬ್ಬರಿಗೂ ಕಷ್ಟ. ಅದು ತಪ್ಪೂ ಕೂಡ. ಸಮಾನತೆ ಮತ್ತು ಸಹಬಾಳ್ವೆಗಾಗಿ ಹೋರಾಡುತ್ತ, 12ನೇ ಶತಮಾನದಲ್ಲಿಯೆ ಜಾತ್ಯತೀತವಾದ [...]