ಅಂತರ್ಜಾಲದ ಕನ್ನಡ ಬರಹಗಳಿಗೆ (ಒಟ್ಟು) 15 ಸಾವಿರ ರೂಪಾಯಿಗಳ ಬಹುಮಾನ…
Posted Under: Uncategorized
ಗೆಳೆಯರೆ,
ಎಲ್ಲರಿಗೂ 2009, ಹೊಸ ವರ್ಷದ ಶುಭಾಶಯಗಳು.
ವಿಚಾರ ಮಂಟಪದ ವತಿಯಿಂದ ನಮ್ಮೆಲ್ಲರಿಗೂ ಸಂಬಂಧಿಸಿದ ಕನಿಷ್ಠ ಎರಡು ವಿಷಯಗಳ ಮೇಲೆ ಲೇಖನಗಳನ್ನು ಆಹ್ವಾನಿಸೋಣ ಎಂದು ಮನಸ್ಸಿಗೆ ಬಂದ ತಕ್ಷಣ ಈ ಆಹ್ವಾನ ಬರೆಯುತ್ತಿದ್ದೇನೆ. ಕನ್ನಡ ಬರೆಯಬಲ್ಲ ಯಾರು ಬೇಕಾದರೂ ಇದರಲ್ಲಿ ಪಾಲ್ಗೊಳ್ಳಬಹುದು. ಇಂಗ್ಲಿಷಿನಲ್ಲಿ ಬರೆದು ಕನ್ನಡಕ್ಕೆ ಭಾಷಾಂತರಿಸಿ ಬೇಕಾದರೂ ಸಲ್ಲಿಸಬಹುದು.
ದೇಶದ ಗ್ರಾಮೀಣ ಸ್ಥಿತಿ ಮತ್ತು ಕೃಷಿಯ ಬಗ್ಗೆ ಅನುಭವ ಅಥವ ಒಳನೋಟ ಇರುವ ಯಾರು ಬೇಕಾದರೂ ಯೋಚಿಸಿ ಬರೆಯಬಹುದಾದ
“ಗ್ರಾಮೀಣ/ಕೃಷಿ/ರೈತ ಭಾರತದ ಸವಾಲುಗಳು ಮತ್ತು ಪರಿಹಾರಗಳು; ಸರ್ಕಾರಗಳು ಕೈಗೊಳ್ಳಬೇಕಾದ ನೀತಿಗಳು; ಗ್ರಾಮೀಣ ಭಾರತದ ಪ್ರಜಾಆಡಳಿತದ ಸವಾಲುಗಳು; ಜನರ ಪಾತ್ರ ಮತ್ತು ಅವರ ಮಿತಿಗಳು; ಗ್ರಾಮೀಣ ಉದ್ದಿಮೆಗಳು; ಇತ್ಯಾದಿ…”, ಮೊದಲ ವಿಷಯ.
ಎರಡನೆಯದು,
“ಭಾರತದ ಐಟಿ/ಬಿಪಿಒ ಉದ್ದಿಮೆ, ಅದರಿಂದಾದ/ಆಗುತ್ತಿರುವ ಒಳ್ಳೆಯ/ಕೆಟ್ಟ ಪರಿಣಾಮಗಳು; ನೌಕರರ ಮತ್ತು ಕಂಪನಿಗಳ ಸವಾಲುಗಳು, ಪರಿಹಾರಗಳು; ಮುಂದೆ ಸವೆಸಬೇಕಾದ ದಾರಿ; ಸರ್ಕಾರ ಮತ್ತು ಉದ್ಯಮ ತೆಗೆದುಕೊಳ್ಳಬಹುದಾದ ನಿರ್ಣಯಗಳು, ಇತ್ಯಾದಿ…”
ಪ್ರತಿ ವಿಷಯಕ್ಕೂ ಮೊದಲ ಬಹುಮಾನ ರೂ.2500
ಸಮಾಧಾನಕರ ಬಹುಮಾನಗಳು 5 – ತಲಾ ರೂ.1000
(ಒಂದು ವಿಷಯಕ್ಕೆ ಒಟ್ಟು ಬಹುಮಾನದ ಮೊತ್ತ ರೂ.7500)
ಪ್ರೀತಿಯಲ್ಲಿ,
ರವಿ…